Advertisement
ಪ್ರಕರಣದಲ್ಲಿ ಆರೋಪಿಗಳಾಗಿರುವ ಸಿ.ಎನ್. ಶಶಿಧರ್, ಆರ್. ಶರತ್ ಕುಮಾರ್, ಎಚ್.ಯು.ರಘುವೀರ್, ಕೆ.ಸಿ. ದಿಲೀಪ್ ಕುಮಾರ್, ಎಚ್.ಆರ್. ಪ್ರವೀಣ್ ಕುಮಾರ್, ಕೆ.ಸೂರ್ಯ ನಾರಾಯಣ ಅವರು ಸಲ್ಲಿಸಿರುವ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಚ್. ಪಿ. ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
Related Articles
Advertisement
ಅದಕ್ಕೆ ಉತ್ತರಿಸಿದ ಎಸ್‌ಪಿಸಿ, ಯಾವುದೇ ಲೋಪಕ್ಕೆ ಅವಕಾಶವಿಲ್ಲದೆ ಪಾರದರ್ಶಕ ರೀತಿಯಲ್ಲಿ ಅತ್ಯಂತ ವೈಜ್ಞಾನಿಕ, ವೃತ್ತಿಪರ ಮತ್ತು ಕಾನೂನಾತ್ಮಕವಾಗಿ ತನಿಖೆ ನಡೆಸಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ತೀರ್ಪು ಕಾಯ್ದಿರಿಸಿದ ಹೈಕೋರ್ಟ್: ಆರೋಪಿಗಳಿಗೆ ಜಾಮೀನು ನೀಡುವಂತೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಜಾಮೀನು ನೀಡಬಾರದು. ದಂಡ ವಿಧಿಸಿ ಜಾಮೀನು ಅರ್ಜಿಗಳನ್ನು ವಜಾಗೊಳಿಸಬೇಕು ಎಂದು ಸರ್ಕಾರ ಬಲವಾಗಿ ವಾದಿಸಿತು. ವಾದ-ಪ್ರತಿವಾದ ಆಲಿಸಿ, ವಿಚಾರಣೆ ಪೂರ್ಣಗೊಳಿಸಿದ ನ್ಯಾಯಪೀಠ ತೀರ್ಪು ಕಾಯ್ದಿರಿಸಿತು. ಸಾಧ್ಯವಾದರೆ ಶುಕ್ರವಾರ ತೀರ್ಪು ಪ್ರಕಟಿಸುವುದಾಗಿಯೂ ನ್ಯಾಯಪೀಠ ಹೇಳಿತು.
ಅಮೃತ್ ಪೌಲ್ ತನಿಖೆಗೆ ಸಹಕರಿಸುತ್ತಿಲ್ಲಪ್ರಕರಣದಲ್ಲಿ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪೌಲ್, ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳೇ ಭಾಗಿಯಾಗಿದ್ದಾರೆ. ಇದರಿಂದ ಇಡೀ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬಂದಿದೆ. ಇದಲ್ಲದೇ ಇನ್ನೂ ಹಲವು “ಕಪ್ಪು ಕುಳ’ಗಳು ಹಗರಣದಲ್ಲಿ ಭಾಗಿಯಾಗಿದ್ದು, ಅವರನ್ನು ಪತ್ತೆ ಹಚ್ಚಬೇಕಿದೆ. ಮಧ್ಯವರ್ತಿಗಳೊಂದಿಗಿನ ಮಾತುಕತೆಯ ಸಿಡಿಆರ್ ಲಭ್ಯವಾಗಿದೆ. ಅಮೃತ್ ಪೌಲ್ ತನಿಖೆಗೆ ಸಹಕರಿಸದ ಕಾರಣ ಮಂಪರು ಪರೀಕ್ಷೆಗೆ ಅನುಮತಿ ಕೋರಲಾಗಿದೆ. ಅವರ ಫೋನ್ ಅನ್ನು ಎಫ್ಎಸ್ ಎಲ್‌ಗೆ ಕಳಿಸಲಾಗಿದೆ. ನೇಮಕಾತಿ ವಿಭಾಗದ ಹೆಡ್ ಕಾನ್ಸ್‌ಟೇಬಲ್ ಶ್ರೀಧರ್ ಎಂಬುವರಿಂದ 2 ಕೋಟಿ ರೂ. ಹಣ ವಶಕ್ಕೆ ಪಡೆಯಲಾಗಿದೆ. ಹಗರಣದಲ್ಲಿ ಆರೋಪಿಯಾಗಿರುವ ಬ್ಯಾಡರಹಳ್ಳಿ ಪೊಲೀಸ್ ಠಾಣೆ ಪಿಎಎಸ್‌ಐ ನವೀನ್ ಪ್ರಸಾದ್ ನಾಪತ್ತೆಯಾಗಿದ್ದಾರೆ. ಹಾಗಾಗಿ ಜಾಮೀನು ಅರ್ಜಿಗಳನ್ನು ದಂಡ ವಿಧಿಸಿ ವಜಾಗೊಳಿಸಬೇಕು ಎಂದು ಎಸ್‌ಪಿಪಿ ವಿ.ಎಸ್. ಹೆಗ್ಡೆ ಮನವಿ ಮಾಡಿದರು.