Advertisement
ಈ ವಿಚಾರವಾಗಿ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಹಿರಿಯ ನ್ಯಾಯಮೂರ್ತಿ ಅಲೋಕ್ ಆರಾಧೆ ಹಾಗೂ ನ್ಯಾ| ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯ ಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.
Related Articles
Advertisement
ಪಿಎಸ್‌ಐ ಹಗರಣಕ್ಕೆ ಸಂಬಂಧಿಸಿದಂತೆ ಈವರೆಗೆ ವಿವಿಧೆಡೆ ದಾಖಲಾಗಿರುವ ಎಫ್ಐಆರ್ ಮತ್ತು ದೂರುಗಳಿಗೆ ಸಂಬಂಧಿಸಿದ ಸಂಪೂರ್ಣ ತನಿಖಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸಿಐಡಿಗೆ ಆದೇಶಿಸಬೇಕು. ಪ್ರಕರಣದ ತನಿಖೆ ನಡೆಸಿರುವ ಸಿಐಡಿಗೆ ಪೊಲೀಸ್ ನೇಮಕಾತಿ ವಿಭಾ
ಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಮೃತ್ ಪೌಲ್ ಬಂಧನದ ಬಳಿಕದ ಸ್ಥಿತಿಗತಿಯ ಕುರಿತು ಮಾಹಿತಿ ನೀಡಲು ನಿರ್ದೇಶಿಸಬೇಕು. ನ್ಯಾಯಯುತ, ಸ್ವಾತಂತ್ರ ಮತ್ತು ಪಾರದರ್ಶಕವಾಗಿ ತನಿಖೆ ನಡೆಸಲು ರಾಜ್ಯ ಸರಕಾರ ಮತ್ತು ಸಿಐಡಿಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.