Advertisement

PSI Parashuram Case: ಯಾದಗರಿ ಶಾಸಕ ಚೆನ್ನಾರೆಡ್ಡಿ‌ಹಾಗೂ ಪುತ್ರನ ವಿರುದ್ಧ ಎಫ್ಐಆರ್

02:01 PM Aug 03, 2024 | Team Udayavani |

ಕಲಬುರಗಿ/ಯಾದಗಿರಿ: ಪಿಎಸ್ಐ ಸಾವಿನಲ್ಲಿ ಶಾಸಕ‌ ಚೆನ್ನಾರೆಡ್ಡಿ ಪಾಟೀಲ ಹಾಗೂ ಅವರ ಪುತ್ರ ಸನ್ನಿರೆಡ್ಡಿ ಪಾಟೀಲ ಕೈವಾಡ ಇರುವುದಾಗಿ ಮೃತ ಪಿಎಸ್ಐ ಪತ್ನಿ ದೂರು ನೀಡಿರುವ ಹಿನ್ನಲೆಯಲ್ಲಿ ಶಾಸಕ ಹಾಗೂ ಪುತ್ರ ಸನ್ನಿರೆಡ್ಡಿ ವಿರುದ್ಧ ಯಾದಗಿರಿ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Advertisement

ಶಾಸಕ ಹಾಗೂ ಪುತ್ರನ ನಿರಂತರ ಒತ್ತಡದಿಂದ ನನ್ನ ಪತಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಅಲ್ಲದೆ ವರ್ಗಾವಣೆ ಮಾಡಿರುವುದು ಕೂಡ ನಿಯಮಬಾಹಿರ. ನನಗೆ ಅನ್ಯಾಯವಾಗಿದೆ. ಶಾಸಕ ಹಾಗೂ ಅವರ ಪುತ್ರ 30 ಲಕ್ಷ ರೂ ಗಳಿಗೆ ಬೇಡಿಕೆ ಇಟ್ಟಿದ್ದರು. ಕೊಡದೆ ಇದ್ದಾಗ ನನಗೆ ವರ್ಗಾವಣೆ ಮಾಡಿದ್ದಾರೆ ಎಂದು ನನ್ನ ಬಳಿ ಹೇಳಿಕೊಂಡಿದ್ದರು ಎಂದು ದೂರಿನಲ್ಲಿ ಪತ್ನಿ ಶ್ವೇತಾ ಅಪಾದನೆ ಮಾಡಿದ್ದಾರೆ.

ಅಲ್ಲದೆ ನನ್ನ ಪತಿಯ ಸಾವಿಗೆ ನೇರವಾಗಿ ಶಾಸಕರು ಹಾಗೂ ಅವರ ಪುತ್ರ ನೇರ ಕಾರಣ ಎಂದೂ ದೂರಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ಸರಕಾರಕ್ಕೆ ಮತ್ತೊಂದು ಕಂಟಕ ಎದುರಾದಂತಾಗಿದೆ.

ಯತ್ನಾಳ್‌ ಕಿಡಿ

Advertisement

ಒಬ್ಬ ದಲಿತ ಅಧಿಕಾರಿಯ ವರ್ಗಾವಣೆಗೆ ಪ್ರಭಾವ ಬೀರಿದ ಚನ್ನಾ ರೆಡ್ಡಿ ಅವರ ಮೇಲೆ ದಲಿತ ದೌರ್ಜನ್ಯ ಕಾಯ್ದೆಯಡಿ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಜನಪ್ರತಿನಿಧಿಯಾಗಿ ಮಾದರಿಯಾಗಿರಬೇಕಾಗಿದ್ದ ಶಾಸಕರು ಒಬ್ಬ ಅಧಿಕಾರಿಯ ಸಾವಿಗೆ ಪರೋಕ್ಷವಾಗಿ ಕಾರಣರಾಗಿದ್ದಾರೆ. ಚನ್ನಾ ರೆಡ್ಡಿ ಅವರು ಕೂಡಲೇ ಈ ಸಾವಿಗೆ ನೈತಿಕ ಹೊಣೆ ಹೊತ್ತು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next