Advertisement

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

10:50 PM Mar 28, 2024 | Team Udayavani |

ಬೆಂಗಳೂರು: ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌  ಹುದ್ದೆಗಳ ನೇಮಕಾತಿ ಮರು ಪರೀಕ್ಷೆಯ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

Advertisement

545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದ ಹಿನ್ನೆಲೆಯಲ್ಲಿ ಹೈಕೋರ್ಟ್‌ ನಿರ್ದೇಶನದಂತೆ ಜ. 23ರಂದು ಮರು ಪರೀಕ್ಷೆ ನಡೆದಿತ್ತು. ಮಾ.1ರಂದು ತಾತ್ಕಾಲಿಕ ಅಂಕ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಆಕ್ಷೇಪಣೆಗಳನ್ನು ಆಹ್ವಾನಿಸಿ, ಪರಿಶೀಲಿಸಿ ಗುರುವಾರ ಅಂತಿಮ ಅಂಕಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಕೆಇಎ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next