Advertisement
ಸರಕಾರದ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ| ಜಿ. ನರೇಂದರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ತಡೆ ವಿಸ್ತರಿಸಿ ಆದೇಶಿಸಿ, ವಿಚಾರಣೆಯನ್ನು ಮುಂದೂಡಿತು.
ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಪಿಎಸ್‌ಐ ನೇಮಕಾತಿಗೆ ನಡೆಸಲಾಗಿದ್ದ ಲಿಖೀತ ಪರೀಕ್ಷೆ ರದ್ದುಪಡಿಸಿದ್ದ ಸರ್ಕಾರ, ಮರುಪರೀಕ್ಷೆ ನಡೆಸುವುದಾಗಿ 2022ರ ಏ.29ರಂದು ಆದೇಶಿಸಿತ್ತು. ಈ ಆದೇಶ ರದ್ದುಪಡಿಸುವಂತೆ ಕೋರಿ ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ (ಕೆಎಟಿ) ಅರ್ಜಿ ಸಲ್ಲಿಸಿದ್ದರು. ಅದನ್ನು ವಜಾಗೊಳಿಸಿ 2022ರ ಜು.19ರಂದು ಕೆಎಟಿ ವಜಾಗೊಳಿಸಿತ್ತು. ಇದರಿಂದ ಅಭ್ಯರ್ಥಿಗಳು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.