Advertisement
ಪತ್ರಿಕಾಗೋಷ್ಠಿಯಲ್ಲಿ ಮಾತನಾ ಡಿದ ಅವರು, ಪ್ರಕರಣದಲ್ಲಿ ನ್ಯಾಯಾಲಯವು ಸರಕಾರದ ಅಭಿಪ್ರಾಯ ಕೇಳಿದ್ದು, ನಾವು ಮರು ಪರೀಕ್ಷೆ ಮಾಡುವುದಾಗಿ ಸ್ಪಷ್ಟವಾಗಿ ಹೇಳಿದ್ದೇವೆ. ನಮ್ಮ ಅಭಿಪ್ರಾಯವನ್ನು ಪುರಸ್ಕರಿಸಿದರೆ, ನ್ಯಾಯಾಲಯದ ಆದೇಶ ಹೊರಬಿದ್ದ ಒಂದು ತಿಂಗಳಲ್ಲೇ ಪಿಎಸ್‌ಐ ನೇಮಕಾತಿ ಮರು ಪರೀಕ್ಷೆಗೆ ಆದೇಶ ಹೊರಡಿಸಲಾಗುವುದು. ಇನ್ನು 545 ಪಿಎಸ್‌ಐ ನೇಮಕಾತಿ ಹಗರಣ ಆದ ಬಳಿಕ 490 ಪಿಎಸ್‌ಐ ನೇಮಕಾತಿಗೆ ಸಂಬಂಧಿಸಿದಂತೆ ದೈಹಿಕ ಪರೀಕ್ಷೆ ಮುಗಿದಿವೆ. ಆದರೆ ಲಿಖೀತ ಪರೀಕ್ಷೆಗಳು ನಡೆದಿಲ್ಲ. 545 ಪಿಎಸ್‌ಐ ನೇಮಕಾತಿ ಆದ ಮೇಲೆಯೇ ಎರಡನೇ ಬ್ಯಾಚ್‌ನ ಲಿಖೀತ ಪರೀಕ್ಷೆಗಳು ನಡೆಯಲಿವೆ ಎಂದರು.
ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾದವರ ಮೇಲಿನ ಪ್ರಕರಣವನ್ನು ಹಿಂಪಡೆಯಲು ಆಗುವುದಿಲ್ಲ. ಆ ಕುರಿತು ಸಂಪುಟದಲ್ಲಿ ಚರ್ಚೆಯಾಗ ಬೇಕು. ರಾಜ್ಯದಲ್ಲಿ ಮಾದಕ ವಸ್ತುಗಳ ಕಡಿವಾಣಕ್ಕೆ ಸಮರ ಸಾರಿದ್ದೇವೆ. ಈಗ ಬಹಳ ಕಡಿಮೆ ಸಂಖ್ಯೆಯಲ್ಲಿ ಡ್ರಗ್ಸ್ ಬಳಕೆಯಾಗುತ್ತಿದೆ. ಇದನ್ನು ಸಂಪೂರ್ಣವಾಗಿ ಸ್ಥಗಿತ ಮಾಡಬೇಕಿದೆ. ಇನ್ನು ಆರು ತಿಂಗಳಲ್ಲಿ ಡ್ರಗ್ಸ್ ಮುಕ್ತ ಕರ್ನಾಟಕ ಘೋಷಣೆ ಮಾಡಬೇಕು ಎಂದು ಇಲಾಖೆಗೆ ಸೂಚನೆ ಕೊಟ್ಟಿದ್ದೇನೆ. ಸೈಬರ್ ಅಪರಾಧ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು. ಬೆಂಗಳೂರು ನಗರ ವ್ಯಾಪ್ತಿಯಲ್ಲಿ 2,500 ಹಾಗೂ ರಾಜ್ಯವ್ಯಾಪ್ತಿ 3,500 ಪೊಲೀಸ್ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಿದ್ದು, ನೇಮಕಾತಿ ಪ್ರಕ್ರಿಯೆ ಆರಂಭಗೊಂಡಿದೆ. ಒಂದು ಸ್ಥಳದಲ್ಲಿ ವರ್ಷಕ್ಕೆ 350ಕ್ಕಿಂತಲೂ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾದರೆ ಅಲ್ಲಿ ಪೊಲೀಸ್ ಠಾಣೆಗಳನ್ನು ಮಾಡಬಹುದು. ಎಲ್ಲಿ ಠಾಣೆಗಳ ಅಗತ್ಯ ಇದೆ ಎಂಬುದನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದರೆ ಪರಿಶೀಲಿಸಿ ಅನುಮತಿ ನೀಡಲಾಗುವುದು ಎಂದರು.
Related Articles
ಸೌಜನ್ಯಾ ಪ್ರಕರಣದ ಮರು ತನಿಖೆ ಆಗಬೇಕೆಂಬ ಬೇಡಿಕೆ ಸಾರ್ವಜನಿಕ ವಲಯದಲ್ಲಿದೆ. ಈ ಬಗ್ಗೆ ಪರ-ವಿರೋಧವೂ ಇದೆ. ಈಗಾಗಲೇ ಪ್ರಕರಣವು ಕಾನೂನಾತ್ಮಕವಾಗಿ ಮುಗಿದು ಹೋಗಿದ್ದು, ಇದರಲ್ಲಿ ಸರಕಾರ ಏನೂ ಮಾಡಲು ಆಗದು. ಮರು ತನಿಖೆ ಮಾಡುವ ವಿಚಾರ ಸರಕಾರದ ಮುಂದಿಲ್ಲ ಎಂದು ಗೃಹ ಸಚಿವರು ಹೇಳಿದರು.
Advertisement