ಬೆಂಗಳೂರು : ಪಿಎಸ್ ಐ ನೇಮಕಾತಿ ಹಗರಣದ ತನಿಖೆಯನ್ನು ತೀವ್ರ ಗೊಳಿಸಿರುವ ಸಿಐಡಿ ಅಧಿಕಾರಿಗಳು ಪ್ರಮುಖ ಆರೋಪಿ ಡಿವೈಎಸ್ಪಿ ಶಾಂತಕುಮಾರ್ ಅವರನ್ನು ಗುರುವಾರ ಬಂಧಿಸಿದ್ದಾರೆ. ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ ಬಳಿಕ ಶಾಂತಕುಮಾರ್ ಅವರನ್ನು ಬಂಧಿಸಲಾಗಿದೆ.
10 ವರ್ಷಗಳಿಂದ ನೇಮಕಾತಿ ವಿಭಾಗದಲ್ಲಿ ಡಿವೈಎಸ್ಪಿ ಆಗಿ ಶಾಂತಕುಮಾರ್ ಕೆಲಸ ನಿರ್ವಹಿಸುತ್ತಿದ್ದರು. ಅಕ್ರಮ ಬಯಲಾಗುತ್ತಿದ್ದಂತೆ ಸರಕಾರ ಅವರನ್ನು ವರ್ಗಾವಣೆ ಮಾಡಿತ್ತು. ಶಾಂತಕುಮಾರ್ ಪ್ರಕರಣದ ಪ್ರಮುಖ ಕಿಂಗ್ ಪಿನ್ ಎಂದು ಹೇಳಲಾಗಿದೆ.
ಇದನ್ನೂ ಓದಿ : ರಸಗೊಬ್ಬರ ಅಕ್ರಮ ಮಾರಾಟ: ಕೃಷಿ ಜಾಗೃತ ದಳದ ಅಧಿಕಾರಿಗಳು ದಾಳಿ; ಕೇಸ್ ದಾಖಲು
1996 ರಲ್ಲಿ ಕಾನ್ ಸ್ಟೇಬಲ್ ಆಗಿ ಪೊಲೀಸ್ ಇಲಾಖೆಗೆ ಸೇರಿದ್ದ ಶಾಂತಕುಮಾರ್ ಡಿವೈಎಸ್ಪಿ ಆಗಿದ್ದು ಹೇಗೆ ಮತ್ತು ನಿರಂತರವಾಗಿ ನೇಮಕಾತಿ ವಿಭಾಗದಲ್ಲಿ ಭದ್ರವಾಗಿ ಉಳಿದದ್ದು ಹೇಗೆ ಎನ್ನುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ನೇಮಕಾತಿ ವಿಭಾಗದ ಎಡಿಜಿಪಿ ಅಮ್ರಿತ್ ಪಾಲ್ ಗೂ ಸಂಕಷ್ಟ ಎದುರಾಗಿದ್ದೂ ಅವರನ್ನೂ ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.