ಕುಷ್ಟಗಿ : ರಾಜ್ಯ ಪೊಲೀಸ್ ಇಲಾಖೆಯ ಪ್ರಸ್ತುತ ಪಿಎಸೈ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿ, ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಮೆರಿಟ್, ರೋಸ್ಟರ್ ಅನ್ವಯ ಆದ್ಯತೆ ನೀಡಬೇಕೆಂದು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಅವರು ಸಿಬ್ಬಂದಿ ಮತ್ತು ಆಡಳಿತ ಸುಧರಣಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಗೆ ಪತ್ರ ಬರೆದಿದ್ದಾರೆ.
ಸದರಿ ಪತ್ರ ಉದಯವಾಣಿಗೆ ಲಭ್ಯವಾಗಿದ್ದು, ಸರ್ಕಾರದ ಕಾರ್ಯದರ್ಶಿ ಬರೆದಿರುವ ಪತ್ರದಲ್ಲಿ ಪ್ರಸ್ತಾಪಿಸಿದಂತೆ ಶಾಸಕ ಬಯ್ಯಾಪೂರ ಅವರು, ಕಲ್ಯಾಣ ಕರ್ನಾಟಕ ಪ್ರದೇಶದ 371 (ಜೆ) ಅಡಿಯಲ್ಲಿ ರಚಿಸಲಾದ ಕರ್ನಾಟಕ ಸಾರ್ವಜನಿಕ ಉದ್ಯೋಗ ಮೀಸಲಾತಿಯಲ್ಲಿ ಆದೇಶದನ್ವಯ 2013 ರನ್ವಯ ವಿವಿಧ ವೃಂಧದ ನೇಮಕಾತಿಯಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ನೇಮಕಾತಿ ಪ್ರಾಧೀಕಾರಗಳು ನಡೆಸುವ ಯಾವೂದೇ ನೇಮಕಾತಿಯನ್ನು ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ 6-6-2020ರ ಸುತ್ತೋಲೆಯಲ್ಲಿ ನಡೆಸುವಂತೆ ಸೂಚ್ಯವಾಗಿ ತಿಳಿಸಲಾಗಿದೆ.
ರಾಜ್ಯ ಪೊಲೀಸ್ ಇಲಾಖೆಯ ಪಿಎಸೈ (ಸಿವಿಲ್) ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳು ಹೆಚ್ಚು ಅಂಕ ಪಡೆದರೂ, ಸಹ ಸ್ಥಳೀಯ ವೃಂದದ ಆಯ್ಕೆ ಪಟ್ಟಿಯಲ್ಲಿ ಆಯ್ಕೆ ಮಾಡಲಾಗಿದೆ. ಇದು ಇನ್ನುಳಿದ ಅಭ್ಯರ್ಥಿಗಳಿಗೆ ಅನ್ಯಾಯವಾಗಲಿದೆ.
ಗ್ರಾಮೀಣ ಭಾಗದ ಅಭ್ಯರ್ಥಿಗಳ ಉ 6-6-2020ರ ಸುತ್ತೋಲೆಯನ್ನು ಅರ್ಥ ಮಾಡಿಕೊಳ್ಳುವಲ್ಲಿ ಗೊಂದಲ ಮಾಡಿಕೊಂಡಿಕೊಂಡಿದ್ದಾರೆ. ಪಿಎಸೈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸುವಾಗ ತಪ್ಪಾಗಿ ಆಯ್ಕೆ ಸೂಚಿಸಿರುವುದರಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ಅಭ್ಯರ್ಥಿಗಳಿಗಿಂತ ಹೆಚ್ಚು ಅಂಕ ಪಡೆದರೂ ಸಹ ಸ್ಥಳೀಯ ವೃಂಧದಲ್ಲಿ ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಆಯ್ಕೆಯಾಗಿರುತ್ತಾರೆ.
ಇದನ್ನೂ ಓದಿ : ಬಂಡೀಪುರ: ನುರಿತ ಐಸಿಟಿ ಪದವೀಧರರು, ಅರಣ್ಯಾಧಿಕಾರಿಗಳಿಂದ ಹುಲಿ ಗಣತಿ
ಈ ಹಿನ್ನೆಲೆಯಲ್ಲಿ ಸದರಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿ ಮೆರಿಟ್, ರೋಸ್ಟರ್ ಅನ್ವಯ ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳನ್ನು ಮೊದಲಾದ್ಯತೆ ನೀಡಬೇಕು. ಮಿಕ್ಕುಳಿದ ವೃಂದದಲ್ಲಿ ಆಯ್ಕೆ ಮಾಡಿ ಕಡಿಮೆ ಅಂಕ ಪಡೆದಿರುವ ಅಭ್ಯರ್ಥಿಗಳನ್ನು ಸ್ಥಳೀಯ ವೃಂಧದಲ್ಲಿ ಆಯ್ಕೆ ಮಾಡುವಂತೆ ಸಂಬಂಧಪಟ್ಟ ನೇಮಕಾತಿ ಪ್ರಾಧಿಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಪತ್ರ ಬರೆದಿದ್ದಾರೆ.