ಕಲಬುರಗಿ: 545 ಪಿಎಸ್ಐ ನೇಮಕಾತಿಯ ಪರೀಕ್ಷೆ ಹಗರಣ ತನಿಖೆ ಸಿಐಡಿ ತೀವ್ರಗೊಳಿಸಿದ್ದು, ಮಹಿಳಾ ಕೋಟಾದಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದ ರಚನಾ ಎಂಬ ಅಭ್ಯರ್ಥಿಯನ್ನು ಬಂಧಿಸಲಾಗಿದೆ.
ಪಿಎಸ್‌ಐ ಮಹಿಳಾ ಕೋಟಾದಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದ ರಚನಾ ಬಂಧಿತ ಆರೋಪಿ ಯಾಗಿದ್ದು, ವಿಶೇಷವೆನಂದರೆ ಪಿಎಸ್‌ಐ ಪರೀಕ್ಷಾ ಅಕ್ರಮ ಹೋರಾಟದಲ್ಲಿ ಮುಂಚೂಣಿ ಪಾತ್ರ ವಹಿಸಿದ್ದರು.
ರಚನಾ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಮೂಲದವಳಾಗಿದ್ದು, ಪಿಎಸ್‌ಐ ಹಗರಣ ಹೊರ ಬಂದಾಗಿನಿಂದ ನಾಪತ್ತೆಯಾಗಿದ್ದರು.
ಬೆಂಗಳೂರು ಸಿಐಡಿ ಅಧಿಕಾರಿಗಳು ಎಷ್ಟೇ ಹುಡುಕಾಟ ನಡೆಸಿದ್ದರೂ ಹಾಗೂ ವ್ಯಾಪಕ ಕಾರ್ಯಾಚರಣೆ ಕೈಗೊಂಡಿದ್ದರೂ ರಚನಾ ಕೈಗೆ ಸಿಕ್ಕಿರಲಿಲ್ಲ. ಮಹಾರಾಷ್ಟ್ರ ಗಡಿಯಲ್ಲಿ ತಲೆ ಮರೆಸಿಕೊಂಡು ಓಡಾಟ ಮಾಡುತ್ತಿರುವುದನ್ನು ಅವಲೋಕಿಸಿ ಕೊನೆಗೂ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.
ಮಹಾರಾಷ್ಟ್ರ-ಕರ್ನಾಟಕ ಗಡಿ ಹಿರೋಳ್ಳಿ ಚೆಕ್‌ಪೋಸ್ಟ್ ಬಳಿ ಜಾಲ ಬೀಸಿ ರಚನಾಳನ್ನು ಖೆಡ್ಡಾಗೆ ಬೀಳಿಸಲಾಗಿದೆ. ಕಳೆದ ಒಂದುವರೆ ತಿಂಗಳಿಂದ ಕಲಬುರಗಿ ಸಿಐಡಿ ಅಧಿಕಾರಿಗಳಿಂದ ಫಾಲೋಅಪ್ ಮಾಡುತ್ತಿದ್ದರು. ಕೊನೆಗೆ ಕಲಬುರಗಿ ಸಿಐಡಿ ಅಧಿಕಾರಿಗಳು ಕೊನೆಗೆ ಖತರ್ನಾಕ ಲೇಡಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಐಡಿ ತಂಡ ರಚನಾಳನ್ನು ಬಂಧಿಸಿ ಕಲಬುರಗಿಗೆ ಕರೆ ತಂದಿದ್ದು, ಶನಿವಾರ ಕಲಬುರಗಿ 5 ನೇ JMFC ಕೋರ್ಟ್ ನ್ಯಾಯಾಧೀಶರ ಮುಂದೆ ರಚನಾಳನ್ನು ಹಾಜರುಪಡಿಸಲಾಗೊದ್ದು
ರಚನಾ ಕರೆದ್ಯೊಯಲು ಕಲಬುರಗಿಗೆ ಸಿಐಡಿ ತಂಡ ಬೆಂಗಳೂರಿನಿಂದ ಕಲಬುರಗಿಗೆ ಬಂದಿದೆ.