Advertisement

ಆಧ್ಯಾತ್ಮಿಕ ವಿಚಾರಗಳಿಂದ ಮಾನಸಿಕ ನೆಮ್ಮದಿ: ಸಂತೋಷ್‌ ಶೆಟ್ಟಿ

01:35 PM Aug 27, 2019 | Suhan S |

ಪುಣೆ, ಅ. 26: ಬಂಟರ ಸಂಘ ಪುಣೆ ವತಿಯಿಂದ ಬ್ರಹ್ಮ ಕುಮಾರಿ ಸಂಸ್ಥೆಯ ಸಹಕಾರದೊಂದಿಗೆ ಆ. 19ರಂದು ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದ ಸಭಾಂಗಣದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಿತು.

Advertisement

ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲ್ಬೆಟ್ಟು ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭ ರಾಜಯೋಗಿನಿ ಬ್ರಹ್ಮಕುಮಾರಿ ಸರಿತಾ ದೀದಿ, ಬ್ರಹ್ಮಕುಮಾರಿ ಸಂಸ್ಥೆಯ ಸದಸ್ಯೆಯರು, ಸಂಘದ ಉಪಾಧ್ಯಕ್ಷ ಸತೀಶ್‌ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಜಿತ್‌ ಹೆಗ್ಡೆ, ಗೌರವ ಕೋಶಾಧಿಕಾರಿ ವೈ. ಚಂದ್ರಹಾಸ ಶೆಟ್ಟಿ, ಜೊತೆ ಕಾರ್ಯದರ್ಶಿ ಪ್ರಶಾಂತ್‌ ಶೆಟ್ಟಿ ಹೆರ್ಡೆಬೀಡು, ಜತೆ ಕೋಶಾಧಿಕಾರಿ ಶ್ರೀನಿವಾಸ ಶೆಟ್ಟಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಎಸ್‌. ಶೆಟ್ಟಿ, ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ರವಿ ಕೆ. ಶೆಟ್ಟಿ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ರಾಜಯೋಗಿನಿ ಬ್ರಹ್ಮಕುಮಾರಿ ಸರಿತಾ ದೀದಿ ಧಾರ್ಮಿಕ ಉಪನ್ಯಾಸವನ್ನು ನೀಡುತ್ತಾ ಜೀವನದಲ್ಲಿ ನಕಾರಾತ್ಮಕ ಅವಕಾಶ ನೀಡದೆ ಧನಾತ್ಮಕ ವಿಚಾರಧಾರೆಗಳನ್ನು ಅಳವಡಿಸಿ ಕೊಂಡು ಯಾರನ್ನೂ ದ್ವೇಷಿಸದೆ ಪ್ರೀತಿಯಿಂದ ವ್ಯವಹರಿಸಿದರೆ ನಮ್ಮ ಜೀವನ ಪಾವನವಾಗುತ್ತದೆ. ಧ್ಯಾನ ಮನಸ್ಸನ್ನು ಪ್ರಫುಲ್ಲಗೊಳಿಸುತ್ತದೆ. ಆಧ್ಯಾತ್ಮಕ ವಿಚಾರಗಳಿಂದ ಧನಾತ್ಮಕ ಚಿಂತನೆಗಳನ್ನು ರೂಢಿಸಿ ಕೊಳ್ಳಬಹುದಾಗಿದೆ ಎಂದರು.

ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿಯವರು ಮಾತನಾಡಿ, ಸಂಘದ ಮೂಲಕ ಹೊಸತನದ ಕಾರ್ಯಕ್ರಮವೊಂದಕ್ಕೆ ಇಂದು ನಾಂದಿ ಹಾಡಿದ್ದು ಸರಿತಾ ದೀದಿಯವರ ಆಧ್ಯಾತ್ಮಿಕ ವಿಚಾರಧಾರೆಗಳು ನಮ್ಮ ಜೀವನಕ್ಕೆ ಮಹತ್ವದ್ದಾಗಿದೆ. ಇಂತಹ ಉತ್ತಮ ಕಾರ್ಯಕ್ರಮದಿಂದ ಪ್ರತಿಯೊಬ್ಬರಿಗೂ ಲಾಭವಾಗಲಿದೆ. ಇಂದಿನ ಒತ್ತಡದ ಜೀವನದಲ್ಲಿ ಒಂದಿಷ್ಟು ಆಧ್ಯಾತ್ಮದ ಸದ್ವಿಚಾರಗಳನ್ನು ಅಳವಡಿಸಿಕೊಂಡರೆ ಮಾನಸಿಕ ನೆಮ್ಮದಿಯ ನಮ್ಮದಾಗಬಹುದಾಗಿದೆ. ಅದೇ ರೀತಿ ಭಜನಾ ಕಾರ್ಯಕ್ರಮವೂ ಇಂದಿನಿಂದ ಪ್ರತಿ ಮಾಸದ ಗಣೇಶ್‌ ಚತುರ್ಥಿಯ ದಿನ ನಡೆಯಲಿದ್ದು ಸಂಘದ ಸದಸ್ಯರೆಲ್ಲರೂ ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಾಗಿದೆ. ಸಂಘವುವರ್ಷಪೂರ್ತಿ ಹತ್ತು ಹಲವು ಕಾರ್ಯಕ್ರಮಗಳನ್ನು ಸಮಾಜ-ಬಾಂಧವರಿಗಾಗಿ ಆಯೋಜಿಸುತ್ತಿದ್ದು ಸಮಾಜ ಬಾಂಧವರೆಲ್ಲರ ಪ್ರೋತ್ಸಾಹ ಅಗತ್ಯವಾಗಿದೆ ಎಂದು ನುಡಿದು ಶುಭ ಹಾರೈಸಿದರು.

ಆರತಿ ಶಶಿಕಿರಣ್‌ ಶೆಟ್ಟಿ ಚಾವಡಿಯಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ದೇವರ ಮಂಟಪಕ್ಕೆ ಆರತಿ ಬೆಳಗಿ ಪೂಜೆ ಸಲ್ಲಿಸಲಾಯಿತು. ಸಂಘದ ಕ್ಕಾರ್ಯಕಾರಿ ಸಮಿತಿ ಸದಸ್ಯರು, ಮಹಿಳಾ ವಿಭಾಗ ಹಾಗೂ ಪ್ರಾದೇಶಿಕ ಸಮಿತಿ ಸದಸ್ಯರು, ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಉಪಸ್ಥಿತರಿದ್ದರು.

Advertisement

 

ಚಿತ್ರ -ವರದಿ: ಕಿರಣ್‌ ಬಿ. ರೈ ಕರ್ನೂರು

Advertisement

Udayavani is now on Telegram. Click here to join our channel and stay updated with the latest news.

Next