Advertisement

ಭಾರತೀಯ ಒಲಿಂಪಿಕ್ ಸಂಸ್ಥೆಯ ಮೊದಲ ಮಹಿಳಾ ಅಧ್ಯಕ್ಷರಾಗಿ ದಂತಕಥೆ ಒಟಗಾರ್ತಿ ಪಿಟಿ ಉಷಾ ಆಯ್ಕೆ

06:07 PM Dec 10, 2022 | Team Udayavani |

ನವದೆಹಲಿ: ಭಾರತೀಯ ಒಲಿಂಪಿಕ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ದಂತಕಥೆ ಒಟಗಾರ್ತಿ ಪಿಟಿ ಉಷಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Advertisement

ಇದರೊಂದಿಗೆ ಐಒಎ ಅಧ್ಯಕ್ಷರಾಗಿ ಆಯ್ಕೆಯಾದ ಮೊದಲ ಮಹಿಳೆ ಎಂಬ ಖ್ಯಾತಿಗೆ ಪಿಟಿ ಉಷಾ ಅವರು ಪಾತ್ರರಾಗಿದ್ದಾರೆ.

58 ವರ್ಷದ ಉಷಾ ಅವರು ಅನೇಕ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ಮತ್ತು 1984ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನ 400 ಮೀ. ಹರ್ಡಲ್ಸ್ ಫೈನಲ್‌ನಲ್ಲಿ ನಾಲ್ಕನೇ ಸ್ಥಾನ ಗಳಿಸಿದ್ದರು. ಭಾರತ ಮತ್ತು ಏಷ್ಯಾ ಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಸುಮಾರು 20 ವರ್ಷಗಳ ಕಾಲ ಹಲವು ಸಾಧನೆ ಮಾಡಿದ ಉಷಾ 2000ರಲ್ಲಿ ಕ್ರೀಡಾ ಬದುಕಿನಿಂದ ನಿವೃತ್ತರಾದರು.

ಸುಪ್ರೀಂ ಕೋರ್ಟ್‌ನಿಂದ ನೇಮಕಗೊಂಡ ನಿವೃತ್ತ ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ಅವರ ಮೇಲ್ವಿಚಾರಣೆಯಲ್ಲಿ ಚುನಾವಣೆ ನಡೆಯಿತು.

‘ಪಯ್ಯೋಳಿ ಎಕ್ಸ್‌ಪ್ರೆಸ್‌’ ಖ್ಯಾತಿಯ ಕೇರಳದ ಉಷಾ ಅವರನ್ನು ಭಾರತೀಯ ಜನತಾ ಪಕ್ಷವು ಜುಲೈನಲ್ಲಿ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನ ಮಾಡಿತ್ತು.

Advertisement

ಮಹಾರಾಜ ಯಾದವೀಂದ್ರ ಸಿಂಗ್ ಬಳಿಕ ಐಒಎ ಅಧ್ಯಕ್ಷ ಹುದ್ದೆ ವಹಿಸಿಕೊಂಡ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆ ಉಷಾ ಅವರದು. 1938-1960ರ ಅವಧಿಯಲ್ಲಿ ಮಹಾರಾಜ ಯಾದವೀಂದ್ರ ಸಿಂಗ್ ಅಧ್ಯಕ್ಷ ಸ್ಥಾನ ನಿಭಾಯಿಸಿದ್ದರು. ಕ್ರಿಕೆಟಿಗರಾಗಿದ್ದ ಅವರು 1934ರಲ್ಲಿ ಟೆಸ್ಟ್ ಪಂದ್ಯವೊಂದನ್ನು ಆಡಿದ್ದರು.

ನ್ಯಾಷನಲ್ ರೈಫಲ್ ಅಸೋಸಿಯೇಷನ್ ​​ಆಫ್ ಇಂಡಿಯಾದ (ಎನ್‌ಆರ್‌ಎಐ) ಅಜಯ್ ಪಟೇಲ್ ಅವರು ಹಿರಿಯ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಒಲಿಂಪಿಕ್ ಪದಕ ವಿಜೇತ ಶೂಟರ್ ಗಗನ್ ನಾರಂಗ್ ಮತ್ತು ರೋಯಿಂಗ್ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷೆ ರಾಜಲಕ್ಷ್ಮಿ ಸಿಂಗ್ ಡಿಯೋ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಭಾರತೀಯ ವೇಟ್ ಲಿಫ್ಟಿಂಗ್ ಫೆಡರೇಶನ್ (ಐಡಬ್ಲ್ಯುಎಫ್) ಅಧ್ಯಕ್ಷ ಸಹದೇವ್ ಯಾದವ್ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ. ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್) ಅಧ್ಯಕ್ಷ ಮತ್ತು ಮಾಜಿ ಗೋಲ್‌ಕೀಪರ್ ಕಲ್ಯಾಣ್ ಚೌಬೆ ಜಂಟಿ ಕಾರ್ಯದರ್ಶಿಯಾಗಿ (ಪುರುಷ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next