Advertisement
ವಿಧಾನ ಮಂಡಲ ಎಸ್ಸಿ-ಎಸ್‌ಟಿ ಕಲ್ಯಾಣ ಸಮಿತಿಯು ಪಿಟಿಸಿಎಲ್ ಕಾಯ್ದೆಯಡಿ ಭೂಮಿ ಮರುಮಂಜೂರಾತಿ ಕೋರಿ ಅರ್ಜಿ ಸಲ್ಲಿಸಲು ಕಾಲಮಿತಿ ಅನ್ವಯಿಸದಂತೆ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ಈ ಹಿಂದೆ ಶಿಫಾರಸು ಮಾಡಿತ್ತು. ಅಲ್ಲದೆ, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಸಮುದಾಯದ ಬಹುದಿನಗಳ ಬೇಡಿಕೆಯೂ ಇದಾಗಿತ್ತು. ಈಗಲೂ ಈ ಸಂಬಂಧ ಧರಣಿ ಮುಂದುವರಿದಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್‌ನಲ್ಲಿ ಕಾಯ್ದೆ ತಿದ್ದುಪಡಿಯ ಭರವಸೆ ನೀಡಿದ್ದಾರೆ.
Related Articles
ಬಾಬು ಜಗಜೀವನ್‌ರಾಮ್ ಸ್ವಯಂ ಉದ್ಯೋಗ ಯೋಜನೆ ಅಡಿ ಸರಕು ವಾಹನ ಖರೀದಿಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ನೂರು ಫಲಾನುಭವಿಗಳನ್ನು ಆಯ್ಕೆ ಮಾಡುವುದಾಗಿ ಸರಕಾರ ಘೋಷಿಸಿದೆ. ಈಗಾಗಲೇ ಸ್ವಯಂ ಉದ್ಯೋಗ ಕೈಗೊಳ್ಳಲು ವಿದ್ಯುತ್‌ಚಾಲಿತ ತ್ರಿಚಕ್ರ ಸರಕು ವಾಹನ ಖರೀದಿಗೆ 50 ಸಾವಿರ ರೂ. ಧನಸಹಾಯ ನೀಡುವ ಕಾರ್ಯಕ್ರಮ ಇದೆ. ಇದನ್ನು ಮುಂದುವರಿಸಿ, ಬಾಬು ಜಗಜೀವನ್‌ರಾಮ್ ಸ್ವಯಂ ಉದ್ಯೋಗ ಯೋಜನೆ ಅಡಿ ಎಲೆಕ್ಟ್ರಿಕ್ ತ್ರಿಚಕ್ರ ಅಥವಾ ನಾಲ್ಕು ಚಕ್ರದ ಸರಕು ವಾಹನಗಳ ಖರೀದಿಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ನೂರು ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಅವರಿಗೆ ಶೇ.50ರಷ್ಟು ಎರಡು ಲಕ್ಷ ರೂ.ವರೆಗೆ ಸಹಾಯಧನ ನೀಡಲಾಗುವುದು. ಇದಕ್ಕಾಗಿ 400 ಕೋಟಿ ರೂ. ಮೀಸಲಿಡಲಾಗಿದೆ. ಭೂ ಒಡೆತನ ಯೋಜನೆ ಅಡಿ ಘಟಕ ವೆಚ್ಚದ ಮೊತ್ತವನ್ನು 15ರಿಂದ 20 ಲಕ್ಷಗಳಿಗೆ ಹೆಚ್ಚಳ ಮಾಡಿದ್ದು, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ 25 ಲಕ್ಷ ರೂ.ಗಳಿಗೆ ವೃದ್ಧಿಸಲಾಗಿದೆ.
Advertisement