Advertisement

ಬೆಂಗಳೂರು: ಪಿಯು ದಂಡರಹಿತ ದಾಖಲಾತಿ ಅವಧಿ ವಿಸ್ತರಣೆ

09:00 PM Jun 21, 2023 | Team Udayavani |

ಬೆಂಗಳೂರು: ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳಿಗೆ ದಂಡರಹಿತ ದಾಖಲಾತಿ ಅವಧಿಯನ್ನು ಜೂನ್‌ 30ರವರೆಗೆ ವಿಸ್ತರಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸಿಂಧೂ ಬಿ. ರೂಪೇಶ್‌ ಸುತ್ತೋಲೆ ಹೊರಡಿಸಿದ್ದಾರೆ.

Advertisement

ಜುಲೈ 10 ರವರೆಗೆ 670 ರೂ.ಗಳ ದಂಡ ಶುಲ್ಕದೊಂದಿಗೆ ವಿಳಂಬ ದಾಖಲಾತಿ ಮತ್ತು ಜುಲೈ 20ರವರೆಗೆ ವಿಶೇಷ ದಂಡ ಶುಲ್ಕ 2,890 ರೂಗಳನ್ನು ವಿಧಿಸಿ ಪ್ರಥಮ ಮತ್ತು ದ್ವಿತೀಯ ಪಿಯುಸಿಗೆ ದಾಖಲಾತಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

ಆದರೆ ಕನಿಷ್ಟ ಹಾಜರಾತಿಯ ಇರುವುದು ಕಡ್ಡಾಯವಾಗಿರುವ ಹಿನ್ನೆಲೆಯಲ್ಲಿ ಜುಲೈ 20ರ ನಂತರ ಯಾವುದೇ ಕಾರಣಕ್ಕೂ ದಾಖಲಾತಿ ದಿನಾಂಕ ವಿಸ್ತರಿಸುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next