Advertisement
ವಿದ್ಯಾರ್ಥಿಗಳು ಕಡ್ಡಾಯವಾಗಿ ಆರ್‌ಟಿಪಿಸಿಆರ್ ವರದಿಯನ್ನು ತರಬೇಕು. ಸೋಂಕಿತರು 7 ದಿನ ಕಡ್ಡಾಯವಾಗಿ ಕ್ವಾರಂಟೈನ್‌ನಲ್ಲಿರಬೇಕು. ಕ್ವಾರಂಟೈನ್‌ನಿಂದ ಹೊರಬಂದ ಅನಂತರ ಮತ್ತೂಮ್ಮೆ ಆರ್‌ಟಿಪಿಸಿಆರ್ ತಪಾಸಣೆ ಮಾಡಿಸಿ ಕೊಳ್ಳಬೇಕು. ರೋಗ ಲಕ್ಷಣಗಳು ಕಂಡುಬಂದರೆ ಸ್ಥಳೀಯ ಆಡಳಿತಕ್ಕೆ ಕೂಡಲೇ ತಿಳಿಸಬೇಕು, ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬ ಷರತ್ತಿಗೊಳಪಟ್ಟು ಕಾಲೇಜು ಪ್ರಾರಂಭಕ್ಕೆ ಅನುಮತಿ ನೀಡಲಾಗುವುದು. ಇದೇ ಆಧಾರದಲ್ಲಿ ಮುಂದಿನ ದಿನಗಳಲ್ಲಿ 9, 10ನೇ ತರಗತಿಗಳ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
Related Articles
Advertisement
ಶಾಸಕರಾದ ಸಂಜೀವ ಮಠಂದೂರು, ವೇದವ್ಯಾಸ ಕಾಮತ್, ಡಾ| ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ರಾಜೇಶ್ ನಾೖಕ್, ಹರೀಶ್ ಪೂಂಜ, ಪ್ರತಾಪ್‌ಚಂದ್ರ ನಾಯಕ್ ಮಾತನಾಡಿದರು. ಮೇಯರ್ ಪ್ರೇಮಾನಂದ ಶೆಟ್ಟಿ, ಎಸ್‌ಪಿ ಹೃಷಿಕೇಶ್ ಭಗವಾನ್ ಸೋನಾವಣೆ, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಜಿ.ಪಂ. ಉಪಕಾರ್ಯದರ್ಶಿ ಆನಂದ್ ಕುಮಾರ್, ಎಡಿಸಿ ಪ್ರಜ್ಞಾ ಅಮ್ಮೆಂಬಳ ಉಪಸ್ಥಿತರಿದ್ದರು.