Advertisement

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

12:48 AM Oct 06, 2024 | Team Udayavani |

ಬೆಂಗಳೂರು: ಅಲ್ಪಸಂಖ್ಯಾಕರ ಸಮುದಾಯದ ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕೆ ಒತ್ತು ನೀಡಲು ವಕ್ಫ್ ಬೋರ್ಡ್‌ ವತಿಯಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ಸಚಿವ ಜಮೀರ್‌ ಅಹಮದ್‌ ಖಾನ್‌ ಹೇಳಿದರು.

Advertisement

ಇದೀಗ 15 ಜಿಲ್ಲೆಗಳಲ್ಲಿ ಕಾಲೇಜು ಸ್ಥಾಪನೆಗೆ ಭೂಮಿ ಪೂಜೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಯಲ್ಲಿ 1 ಕಾಲೇಜು ಸ್ಥಾಪನೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

ಹಿಜಾಬ್‌ ವಿವಾದದ ಅನಂತರ ಸಮುದಾಯದ ಹೆಣ್ಣು ಮಕ್ಕಳು ಆತಂಕ ಗೊಂಡು ಉನ್ನತ ಶಿಕ್ಷಣದಿಂದ ದೂರ ಸರಿಯುವ ವಾತಾವರಣ ನಿರ್ಮಾಣವಾಗಿತ್ತು. ಆ ಹಿನ್ನೆಲೆಯಲ್ಲಿ ಮಹಿಳಾ ಕಾಲೇಜು ಸ್ಥಾಪನೆ ತೀರ್ಮಾನ ಕೈಗೊಳ್ಳಲಾಗಿದೆ. ಇದೊಂದು ಐತಿಹಾಸಿಕ ತೀರ್ಮಾನ. ಮಹಿಳಾ ಕಾಲೇಜು ಗಳನ್ನು ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆ ಯಿಂದ ನಡೆಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next