Advertisement

ಪಿಯು ಪರೀಕ್ಷೆ: ರಾಜ್ಯಾದ್ಯಂತ ನಾಲ್ಕು ಸೇವಾ ಕೇಂದ್ರ

11:42 PM Jan 17, 2020 | Lakshmi GovindaRaj |

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ನಿರ್ವಹಣೆಗಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಿರು ನಿಯಂತ್ರಣ ಘಟಕ ಹಾಗೂ ಪರೀಕ್ಷಾ ಕೇಂದ್ರಗಳ ಮಾಹಿತಿ ತಿಳಿಯಲು ರಾಜ್ಯಾದ್ಯಂತ ನಾಲ್ಕು ಸೇವಾ ಕೇಂದ್ರ ತೆರೆಯಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ತಿಳಿಸಿದ್ದಾರೆ.

Advertisement

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಸಂಬಂಧ ಪಿಯು ಇಲಾಖೆ ನಿರ್ದೇಶಕರು ಮತ್ತು ಜಿಲ್ಲಾ ಉಪನಿರ್ದೇಶಕ ರೊಂದಿಗೆ ನಡೆಸಿದ ಸಭೆಯ ಬಳಿಕ ಮಾತನಾಡಿ, ಪರೀಕ್ಷೆಗೆ ಸಂಬಂಧಿಸಿದ ಗೌಪ್ಯ ಚಟುವಟಿಕೆಗಳ ನಿರ್ವಹಣೆಗಾಗಿ ಬೆಂಗಳೂರಿನ ಮಲ್ಲೇಶ್ವರದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕೇಂದ್ರ ಕಚೇರಿಯಲ್ಲಿ ನಿಯಂತ್ರಣ ಕೊಠಡಿ ಇದೆ.

ಯಾವುದೇ ರೀತಿಯಲ್ಲೂ ಲೋಪದೋಷವಾಗಂತೆ ಈ ವರ್ಷದಿಂದ ಮತ್ತಷ್ಟು ಜಾಗೃತಿ ವಹಿಸಲು ಆಯಾ ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿಯೂ ಕಿರು ನಿಯಂತ್ರಣ ಘಟಕ ತೆರೆಯಲಾಗುತ್ತಿದೆ. ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ಫೆಬ್ರವರಿಯಲ್ಲಿ ಜಿಲ್ಲಾಧಿಕಾರಿಗಳು, ಖಜಾನಾಧಿಕಾರಿಗಳು, ಪೊಲೀಸ್‌ ಇಲಾಖೆಯನ್ನು ಒಳಗೊಂಡ ಅಧಿಕಾರಿಗಳ ಸಭೆ ನಡೆಸುವುದಾಗಿ ತಿಳಿಸಿದರು.

2020ನೇ ಸಾಲಿನ ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ ಜ.25ರಿಂದ ಫೆ.10ರ ವರೆಗೆ ನಡೆಯಲಿದೆ. 2,46,772 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಅಭ್ಯರ್ಥಿ ಪಟ್ಟಿ, ಅಂಕ ಪಟ್ಟಿ ಹಾಗೂ ಉತ್ತರ ಪತ್ರಿಕೆಗಳನ್ನು ಪ್ರಾಯೋಗಿಕ ಪರೀಕ್ಷಾ ಕೇಂದ್ರಗಳಿಗೆ ಕೂಡಲೇ ರವಾನಿಸಲು ಸೂಚನೆ ನೀಡಿದರು. ಪ್ರಾಯೋಗಿಕ ಪರೀಕ್ಷೆಯ ಅಂಕಗಳನ್ನು ನೇರವಾಗಿ ಆನ್‌ಲೈನ್‌ ಮೂಲಕ ಕೇಂದ್ರಕ್ಕೆ ರವಾನಿಸಲು ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next