Advertisement

ಪಿಯು ಪರೀಕ್ಷೆ ಶುರು

06:42 AM Mar 01, 2019 | |

ವಿಜಯಪುರ: ಇಂದಿನಿಂದ ಪದವಿ ಪೂರ್ವ ಕಾಲೇಜುಗಳ ಪರೀಕ್ಷೆಗಳು ಆರಂಭಗೊಳ್ಳಲಿದ್ದು, ಒಟ್ಟು 41 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. 26,701 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲು ಸಿದ್ಧವಾಗಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ 31 ಸರ್ಕಾರಿ, 51 ಅನುದಾನಿತ ಹಾಗೂ 132 ಅನುದಾನ ರಹಿತ ಪದವಿ ಪೂರ್ವ ಕಾಲೇಜು ಸೇರಿದಂತೆ 218 ಕಾಲೇಜುಗಳಿದ್ದು, ಕಲಾ ವಿಭಾಗದ 14,668, ವಾಣಿಜ್ಯ ವಿಭಾಗದ 4,786 ಹಾಗೂ ವಿಜ್ಞಾನ ವಿಭಾಗದ 7,247 ವಿದ್ಯಾರ್ಥಿಗಳಿದ್ದು, 23,473 ಫ್ರೆಸ್‌ ಪರೀಕ್ಷಾರ್ಥಿಗಳಿದ್ದು, ಹಳೆಯ 2,313 ಪರೀಕ್ಷಾರ್ಥಿಗಳಿದ್ದಾರೆ. ಖಾಸಗಿಯಾಗಿ 915 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

Advertisement

ಪರೀಕ್ಷೆ ಬರೆಯಲಿರುವ ಒಟ್ಟು ಪರೀಕ್ಷಾರ್ಥಿಗಳಲ್ಲಿ 16,072 ಬಾಲಕರು ಹಾಗೂ 10,629 ಬಾಲಕಿಯರು ಸೇರಿ ಒಟ್ಟು 26,701 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮುಕ್ತ ಹಾಗೂ ಪಾರದರ್ಶಕವಾಗಿ ಪರೀಕ್ಷೆ ನಡೆಸಲು 41 ಪರೀಕ್ಷಾ ಕೇಂದ್ರಗಳಲ್ಲಿ 952 ಕೋಣೆಗಳಿದ್ದು, 831 ಕೋಣೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಉಳಿದ ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆ ನಡೆಯುವ ಮುನ್ನಾ ದಿನಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳಲು ಸೂಚಿಸಲಾಗಿದೆ.

ಜಿಲ್ಲೆಯಲ್ಲೇ ವಿಜಯಪುರ ತಾಲೂಕಿನಲ್ಲಿ ಅತಿ ಹೆಚ್ಚು ಅಂದರೆ 14 ಪರೀಕ್ಷಾ ಕೇಂದ್ರಗಳಿದ್ದು, 339 ಪರೀಕ್ಷಾ ಕೋಣೆಗಳಿವೆ. 11,128 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇಂಡಿ ತಾಲೂಕಿನಲ್ಲಿ 7 ಪರೀಕ್ಷಾ ಕೇಂದ್ರಗಳಿದ್ದು, 141 ಪರೀಕ್ಷಾ ಕೋಣೆಗಳಲ್ಲಿ 3,868 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಣಿ ಮಾಡಿಸಿದ್ದಾರೆ. ಸಿಂದಗಿ ತಾಲೂಕಿನಲ್ಲಿ 8 ಪರೀಕ್ಷಾ ಕೇಂದ್ರಗಳಲ್ಲಿಯ 226 ಪರೀಕ್ಷಾ ಕೋಣೆಗಳಲ್ಲಿ 5,038 ಪರೀಕ್ಷಾರ್ಥಿಗಳು, ಮುದ್ದೇಬಿಹಾಳ ತಾಲೂಕಿನಲ್ಲಿ 6 ಪರೀಕ್ಷಾ ಕೇಂದ್ರಗಳಲ್ಲಿಯ 140 ಕೋಣೆಗಳಲ್ಲಿ 4,132 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬಸವನಬಾಗೇವಾಡಿ ತಾಲೂಕಿನಲ್ಲಿ 6 ಪರೀಕ್ಷಾ ಕೇಂದ್ರಗಳಲ್ಲಿ 104 ಕೋಣೆಗಳನ್ನು ಸ್ಥಾಪಿಸಲಾಗಿದ್ದು, 4,132 ಪರೀಕ್ಷಾರ್ಥಿಗಳು ಪರೀಕ್ಷೆ
ಬರೆಯಲಿದ್ದಾರೆ. 

ಜಿಲ್ಲೆಯಲ್ಲಿ ನಕಲು ಮುಕ್ತ ಹಾಗೂ ಪಾರದರ್ಶಕ ಪರೀಕ್ಷೆ ನಡೆಸಲು ಅಗತ್ಯ ಪ್ರಮಾಣದಲ್ಲಿ ಪೊಲೀಸ್‌ ಬಂದೋಬಸ್ತ್ ಏರ್ಪಾಟು ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ನಕಲು ನಡೆಯದಂತೆ ಪರೀಕ್ಷೆ ಕೇಂದ್ರಗಳಿಗೆ ಭೇಟಿ ನೀಡಲು ಪ್ರತಿ ತಾಲೂಕಿನಲ್ಲೂ ಕನಿಷ್ಟ 3 ತಂಡಗಳಂತೆ 15 ರೂಟ್‌ ಮಾಡಲಾಗಿದೆ. ತಹಶೀಲ್ದಾರ್‌ ಅಥವಾ ಉಪ ತಹಶೀಲ್ದಾರ್‌, ಬಿಇಒ ಅಥವಾ ಅವರ ಕಚೇರಿ ಅಧಿಕಾರಿಗಳು ಹಾಗೂ ಪ್ರಾಚಾರ್ಯರು ನೇತೃತ್ವದಲ್ಲಿ ಈ ತಂಡಗಳು ಕಾರ್ಯ ನಿರ್ವಹಿಸುತ್ತಿದ್ದು, ನಕಲು ಮುಕ್ತ ಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಲಾಗಿದೆ.

ಜಿಲ್ಲೆಯಲ್ಲಿ ನಕಲು ಮುಕ್ತ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಪ್ರಶ್ನೆ ಪತ್ರಿಕೆಗಳನ್ನು ಸುರಕ್ಷಿತವಾಗಿ ಪರೀಕ್ಷೆ ಕೇಂದ್ರಗಳಿಗೆ ರವಾನಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ನಿರೀಕ್ಷೆ ಇದೆ.  ಎಸ್‌.ವೈ. ಅಮಾತೆ, ಉಪ ನಿರ್ದೇಶಕ, ಪದವಿ ಪೂರ್ವ ಹಾಗೂ ವೃತ್ತಿ ಶಿಕ್ಷಣ ಇಲಾಖೆ

Advertisement

„ವಿಶೇಷ ವರದಿ

Advertisement

Udayavani is now on Telegram. Click here to join our channel and stay updated with the latest news.

Next