Advertisement

ಪಿಯು ಪರೀಕ್ಷೆ: ಓರ್ವ ಡಿಬಾರ್‌

12:37 PM Mar 10, 2017 | Team Udayavani |

ದಾವಣಗೆರೆ: ಜಿಲ್ಲೆಯ 35 ಪರೀಕ್ಷಾ ಕೇಂದ್ರದಲ್ಲಿ ಗುರುವಾರ ದ್ವಿತೀಯ ಪಿಯು ಪರೀಕ್ಷೆ ಪ್ರಾರಂಭವಾಗಿದ್ದು, ಪರೀಕ್ಷಾ ಕೇಂದ್ರದಿಂದ ವಿದ್ಯಾರ್ಥಿಯೊಬ್ಬ ಉತ್ತರ ಪತ್ರಿಕೆಯೊಂದಿಗೆ ಪರಾರಿಯಾಗಿದ್ದರೆ, ಮತ್ತೂಂದು ಕೇಂದ್ರದಲ್ಲಿ ವಿದ್ಯಾರ್ಥಿ ಡಿಬಾರ್‌ ಆಗಿದ್ದಾನೆ.

Advertisement

ಹರಪನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದ  ಕೊಠಡಿ 11ರಲ್ಲಿ ಇತಿಹಾಸ ಪರೀಕ್ಷೆಗೆ ಹಾಜರಾಗಿದ್ದ ಶಿಂಗ್ರಿಹಳ್ಳಿ ಸರ್ಕಾರಿ ಪಿಯು ಕಾಲೇಜಿನ ಬಿ. ಸುಹೇಲ್‌ ಉತ್ತರ ಪತ್ರಿಕೆಯೊಂದಿಗೆ ಪರಾರಿಯಾದ ವಿದ್ಯಾರ್ಥಿ. ದಾವಣಗೆರೆಯ ನೂತನ ಪಿಯು ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಇತಿಹಾಸ ಪತ್ರಿಕೆ ನಕಲು ಮಾಡುತ್ತಿದ್ದ ಓರ್ವ ವಿದ್ಯಾರ್ಥಿಯನ್ನು ಡಿಬಾರ್‌ ಮಾಡಲಾಗಿದೆ.

ಕಲಾ ವಿಭಾಗದ  ಇತಿಹಾಸ ಪತ್ರಿಕೆಗೆ ಒಟ್ಟು 9,987 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದು, 797 ವಿದ್ಯಾರ್ಥಿಗಳು ಗೈರಾಗಿದ್ದರು. 9,190 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ವಿಜ್ಞಾನ ವಿಭಾಗದ ಜೀವಶಾಸ್ತ್ರ ಪತ್ರಿಕೆಗೆ 7,384 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದು, 7,220 ವಿದ್ಯಾರ್ಥಿಗಳು ಹಾಜರಾಗಿದ್ದರು.

164 ವಿದ್ಯಾರ್ಥಿಗಳು ಗೈರಾಗಿದ್ದರು. ವೇತನ ಪರಿಷ್ಕರಣೆ ಒಳಗೊಂಡಂತೆ ವಿವಿಧ ಬೇಡಿಕೆಯ ಬಗ್ಗೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಉಪನ್ಯಾಸಕರು ಕೈಗೆ ಕಪ್ಪುಪಟ್ಟಿ ಕಟ್ಟಿಕೊಂಡು ಪರೀಕ್ಷಾ ಕಾರ್ಯ ನಿರ್ವಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next