Advertisement

ಪಿಯು ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಳಕ್ಕೆ ಆಗ್ರಹ

08:13 PM Jun 23, 2022 | Team Udayavani |

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ಹಾಗೂ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಗೌರವ ಸಂಭಾವನೆಯನ್ನು ಹೆಚ್ಚಿಸಲಾಗಿದ್ದು, ಅದೇ ರೀತಿಯಲ್ಲಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರಿಗೂ ಗೌರವ ಸಂಭಾವನೆ ಹೆಚ್ಚಳ ಮಾಡುವಂತೆ ಪಿಯು ಕಾಲೇಜು ಅತಿಥಿ ಉಪನ್ಯಾಸಕರ ಸಂಘಟನೆ ಆಗ್ರಹಿಸಿದೆ.

Advertisement

ಇತ್ತೀಚೆಗೆ ಶಿಕ್ಷಣ ಇಲಾಖೆಯು ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ ಮಾಡಿ, ಇದಕ್ಕೆ ಬೇಕಾದ ಅನುದಾನವನ್ನೂ ಬಿಡುಗಡೆ ಮಾಡಿದೆ. ಆದರೆ, ಇದೇ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲೇ ಕರ್ತವ್ಯ ನಿರ್ವಹಿಸುತ್ತಿರುವ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಸರಕಾರ ಕಡೆಗಣಿಸಿದೆ. ಅತಿಥಿ ಉಪನ್ಯಾಸಕರು ಕೇವಲ 9 ಸಾವಿರ ರೂ.ಗಳಿಗೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರಲ್ಲಿ ಜೀವನ ನಿರ್ವಹಣೆ ಕಷ್ಟಸಾಧ್ಯವಾಗಿದ್ದು, ವೇತನ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿದೆ.

ಅಲ್ಲದೆ, ಬಹುತೇಕ ಅತಿಥಿ ಉಪನ್ಯಾಸಕರಿಗೆ ಬಾಕಿಯಿರುವ ಕಳೆದ ಶೈಕ್ಷಣಿಕ ವರ್ಷದ ಮಾರ್ಚ್‌ ಮತ್ತು ಎಪ್ರಿಲ್‌ ತಿಂಗಳ ಗೌರವ ಧನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next