ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯಕ್ಕೆ ಗೈರು ಹಾಜರಾಗುವ ಉಪನ್ಯಾಸಕರ ವಿರುದಟಛಿ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.
ಮಾ.21ರಿಂದ ಮೌಲ್ಯಮಾಪನ ಪ್ರಕ್ರಿಯೆಯ ಕೋಡಿಂಗ್ ಪ್ರಕ್ರಿಯೆ ಆರಂಭವಾಗಿತ್ತು. ಮಾ.23ರಿಂದ ಮೌಲ್ಯಮಾಪನ ಪ್ರಕ್ರಿಯೆಗೆ ಚಾಲನೆ ದೊರೆತಿತ್ತು. ಒಟ್ಟಾರೆ 18,346
ಮೌಲ್ಯಮಾಪಕರ ಪೈಕಿ 11,817 ಮಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. 6,527 ಉಪನ್ಯಾಸಕರು ಗೈರು ಹಾಜರಾಗಿರುವುದು ಇಲಾಖೆ ಗಮನಕ್ಕೆ ಬಂದಿದೆ.
ಪೂರ್ವಾನುಮತಿ ಇಲ್ಲದೇ ಗೈರು ಹಾಜರಾಗಿರುವ ಉಪನ್ಯಾಸಕರ ವಿರುದಟಛಿ ಕ್ರಮಕ್ಕೆ ಇಲಾಖೆ ಮುಂದಾಗಿದೆ. ಈ ವರೆಗೆ ಕರ್ತವ್ಯಕ್ಕೆ ಹಾಜರಾಗದ ಉಪನ್ಯಾಸಕರು ಹಾಗೂ ಪ್ರಾಂಶುಪಾಲರು ಮಂಗಳವಾರ ಮೌಲ್ಯಮಾಪನ ಕೇಂದ್ರಗಳಿಗೆ ತಪ್ಪದೇ ಹಾಜರಾಗುವಂತೆ ಸೂಚನೆ ನೀಡಿದೆ.
ಮಂಗಳವಾರವೂ ಗೈರಾದರೆ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಪಿಯು ಇಲಾಖೆ ನಿರ್ದೇಶಕ ಪಿ.ಸಿ. ಜಾಫರ್ ಎಚ್ಚರಿಕೆ ನೀಡಿದ್ದಾರೆ.