Advertisement

ಮೇ 23ರಿಂದ ಪಿಯು ಪೂರಕ ಪರೀಕ್ಷೆ: ಪರಿಷ್ಕೃತ ವೇಳಾಪಟ್ಟಿ ಪ್ರಕಟ

11:30 PM May 09, 2023 | Team Udayavani |

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023ನೇ ಸಾಲಿನ ದ್ವಿತೀಯ ಪಿಯು ಪೂರಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮೇ 23ರಿಂದ ಜೂ. 3ರ ವರೆಗೆ ನಡೆಯಲಿದೆ.

Advertisement

ಈ ಮೊದಲು ಮೇ 22ರಿಂದ ಪರೀಕ್ಷೆ ನಡೆಸಲು ನಿರ್ಧರಿಸಿತ್ತು. ಆದರೆ ಮೇ 22ರಂದು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಸಿಇಟಿ ಕನ್ನಡ ಭಾಷಾ ಪರೀಕ್ಷೆ ನಿಗದಿಯಾಗಿರುವುದರಿಂದ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ.

ಕೆಲವು ಪರೀಕ್ಷೆಗಳು ಬೆಳಗ್ಗೆ 10.15ರಿಂದ 1.30 ಹಾಗೂ ಮತ್ತೆ ಕೆಲವು ಪರೀಕ್ಷೆ ಅಪರಾಹ್ನ 2.15ರಿಂದ 5.30ರ ವರೆಗೆ ನಡೆಯಲಿದೆ.

ಮೇ 23ರಂದು ಕನ್ನಡ, ಅರೇಬಿಕ್‌, ಮೇ 24-ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ, ಮೇ 25-ಇಂಗ್ಲಿಷ್‌ (ಅಪರಾಹ್ನ- ಐಟಿ, ರೀಟೈಲ್‌, ಆಟೋಮೊಬೈಲ್‌, ಹೆಲ್ತ್‌ ಕೇರ್‌, ಬ್ಯೂಟಿ ಆ್ಯಂಡ್‌ ವೆಲ್‌ನೆಸ್‌), ಮೇ 26-ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ, ಮೇ 27- ಇತಿಹಾಸ, ಸಂಖ್ಯಾಶಾಸ್ತ್ರ, ಮೇ 29-ಹಿಂದಿ (ಅಪರಾಹ್ನ-ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌), ಮೇ 28-ರಜೆ, ಮೇ 29-ಭೂಗೋಳಶಾಸ್ತ್ರ, ಮನಶಾÏಸ್ತ್ರ, ಭೌತಶಾಸ್ತ್ರ, ಮೇ30-ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ, ಮೇ 31- ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ, ಜೂ. 1-ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ, ಜೂ.2-ತರ್ಕಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ, ಜೂ-3ಅರ್ಥಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆಗಳು ನಡೆಯ ಲಿದೆ ಎಂದು ಮಂಡಳಿ ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next