Advertisement

PU ಪೂರಕ ಪರೀಕ್ಷೆ ವೇಳಾಪಟ್ಟಿ: ಮೇ 20ರಿಂದ 31ರವರೆಗೆ ಪರೀಕ್ಷೆ

07:13 PM Mar 26, 2024 | Team Udayavani |

ಬೆಂಗಳೂರು: ಪ್ರಥಮ ಪಿಯು ಪೂರಕ ಪರೀಕ್ಷೆ ಮೇ 20 ರಿಂದ ಮೇ 31ರವರೆಗೆ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ವೇಳಾಪಟ್ಟಿ ಪ್ರಕಟಸಿದೆ.

Advertisement

ಪೂರಕ ಪರೀಕ್ಷೆ ನಡೆಸುವ ಸಂಪೂರ್ಣ ಜವಾಬ್ದಾರಿ ಜಿಲ್ಲಾ ಉಪನಿರ್ದೇಶಕರಿಗೆ ಸೇರಿದೆ. ಮಾರ್ಚ್‌ 30ಕ್ಕೆ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫ‌ಲಿತಾಂಶ ಪ್ರಕಟಿಸುವ ಸಮಯದಲ್ಲಿ ಪೂರಕ ಪರೀಕ್ಷೆಗೆ ಶುಲ್ಕ ಕಟ್ಟಲು ಅನುವಾಗುವಂತೆ ಕಾಲೇಜುಗಳ ಸೂಚನಾ ಫ‌ಲಕದಲ್ಲಿ ಪೂರಕ ಪರೀಕ್ಷೆಯ ವಿವರಗಳನ್ನು ಪ್ರಕಟಿಸುವಂತೆ ಕೆಎಸ್‌ಇಎಬಿ ಸೂಚನೆ ನೀಡಿದೆ.

ಪೂರಕ ಪರೀಕ್ಷೆಗೆ ಶುಲ್ಕ ಕಟ್ಟಲು ಏಪ್ರಿಲ್‌ 20 ಕೊನೆಯ ದಿನವಾಗಿದೆ. ಜೂನ್‌ ಆರರಂದು ಪರೀಕ್ಷೆಯ ಫ‌ಲಿತಾಂಶ ಪ್ರಕಟಿಸಬೇಕು ಎಂದು ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next