Advertisement

7ರಿಂದ 19ರವರೆಗೆ ದ್ವಿತೀಯ ಪಿಯು ಪೂರಕ ಪರೀಕ್ಷೆ

06:19 PM Sep 04, 2020 | Suhan S |

ರಾಯಚೂರು: ಜಿಲ್ಲೆಯ 11 ಕೇಂದ್ರಗಳಲ್ಲಿ ಸೆ.7ರಿಂದ 19ರ ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಎಡಿಸಿ ದುರಗೇಶ ಸೂಚಿಸಿದರು.

Advertisement

ನಗರದ ಸಹಾಯಕ ಆಯುಕ್ತರ ಕಚೇರಿಯಲ್ಲಿ ಗುರುವಾರ ನಡೆದ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, 9,198 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು. ಅವ್ಯವಸ್ಥೆ, ಲೋಪಗಳಾಗದಂತೆ ಪರೀಕ್ಷೆ ನಡೆಸಬೇಕು. ಕೋವಿಡ್‌-19 ಸೋಂಕು ಹಿನ್ನೆಲೆಯಲ್ಲಿ ಮುಖ್ಯ ಪರೀಕ್ಷೆಯಲ್ಲಿ ಕೈಗೊಂಡ ಕ್ರಮ ಕಡ್ಡಾಯವಾಗಿ ಕೈಗೊಳ್ಳಬೇಕು ಎಂದು ತಿಳಿಸಿದರು. ನಕಲು ನಡೆಯದಂತೆ ಎಚ್ಚರ ವಹಿಸಬೇಕು, ಪರೀಕ್ಷಾ ಕೇಂದ್ರಗಳ ಸುತ್ತಲೂ ಬಂದೋಬಸ್ತ್ ಒದಗಿಸಬೇಕು. ಪರೀಕ್ಷೆಗೆ ಹಾಜರಾಗುವ ಕೋವಿಡ್ ಸೋಂಕಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು. ಪರೀಕ್ಷೆ ಮುನ್ನ ಹಾಗೂ ನಂತರ ವಿದ್ಯಾರ್ಥಿಗಳ ಗುಂಪುಗೂಡದಂತೆ ನೋಡಿಕೊಳ್ಳಿ ಎಂದರು.

ಪರೀಕ್ಷಾ ಕೇಂದ್ರಗಳ ಸುತ್ತ 144 ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ನಿಗಾವಹಿಸಲು ಸಹಾಯಕ ಆಯುಕ್ತರ ನೇತೃತ್ವದಲ್ಲಿ ನೋಡಲ್‌ ಅಧಿಕಾರಿಗಳನ್ನು ನೇಮಿಸಬೇಕೆಂದರು. ಈ ವೇಳೆ ಡಿಡಿಪಿಯು ಸದಾಶಿವಪ್ಪ, ತಹಶೀಲ್ದಾರಗಳಾದ ಡಾ. ಹಂಪಣ್ಣ, ಚಾಮರಸ ಪಾಟೀಲ್‌, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ, ಬಿಇಒಗಳಾದ ಆರ್‌. ಇಂದಿರಾ, ಚಂದ್ರಶೇಖರ್‌ ದೊಡ್ಡಮನಿ ಸೇರಿದಂತೆ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next