Advertisement

ಎಸೆಸೆಲ್ಸಿಗೂ ಮೊದಲೇ ಪಿಯು ಪರೀಕ್ಷೆ

08:06 AM May 07, 2020 | Sriram |

ಬೆಂಗಳೂರು: ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆಯನ್ನು ಎಸೆಸೆಲ್ಸಿ ಪರೀಕ್ಷೆಗೂ ಮೊದಲೇ ನಡೆಸಲು ಸರಕಾರ ಚಿಂತನೆ ನಡೆಸುತ್ತಿದೆ.ದ್ವಿತೀಯ ಪಿಯುಸಿ ಇಂಗ್ಲಿಷ್‌ ಹೊತುಪಡಿಸಿ ಬೇರೆಲ್ಲ ಪರೀಕ್ಷೆ ಈಗಾಗಲೇ ಪೂರ್ಣಗೊಂಡಿವೆ. ಆದರೆ ಎಸೆಸೆಲ್ಸಿ ವಿದ್ಯಾರ್ಥಿಗಳ ಒಂದು ಪರೀಕ್ಷೆಯೂ ನಡೆದಿಲ್ಲ. ಹೀಗಾಗಿ ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆ ಮುಗಿಸಿ, ಮೌಲ್ಯಮಾಪನ ನಡೆಸಿ ಫ‌ಲಿತಾಂಶ ನೀಡಲು ಶಿಕ್ಷಣ ಇಲಾಖೆ ಗಂಭೀರ ಚಿಂತನೆ ನಡೆಸಿದೆ.

Advertisement

ಸಿಇಟಿ, ನೀಟ್‌ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೂ ಇದರಿಂದ ಅನುಕೂಲ ಆಗಲಿದೆ ಎಂದು ಅಂದಾಜಿಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next