ರಾಜ್ಯ ಸರಕಾರದ ಆದೇಶದಂತೆ ಸೋಂಕು ಹರಡುವ ಅಪಾಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಸಾರ್ವಜನಿಕ ಸಮಾರಂಭ, ಆಚರಣೆಗಳು ಹಾಗೂ ಮನರಂಜನಾ ಕಾರ್ಯಕ್ರಮಗಳಲ್ಲಿ ಜನರ ಒಗ್ಗೂಡುವಿಕೆಗೆ ಈ ಕೆಳಕಂಡಂತೆ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.
Advertisement
– ಸಾಮಾಜಿಕ ಆಚರಣೆಗಳು, ಸಮಾರಂಭಗಳಿಗೆ ಸರಕಾರದ ಮಾರ್ಗಸೂಚಿಯಂತೆ ಪ್ರತಿ ವ್ಯಕ್ತಿಯು 3.25 ಚ.ಮೀ. ಮಾನದಂಡವನ್ನು ಪಾಲಿಸುವುದು ಕಡ್ಡಾಯವಾಗಿದೆ. ಮದುವೆಗಳಿಗೆ ತೆರೆದ ಪ್ರದೇಶದಲ್ಲಿ 200 ಮಂದಿ ಮೀರದಂತೆ ಹಾಗೂ ಕಲ್ಯಾಣ ಮಂಟಪ, ಸಭಾಂಗಣಗಳು, ಹಾಲ್‌ಗಳು ಇತ್ಯಾದಿ ಮುಚ್ಚಿದ ಪ್ರದೇಶಗಳಲ್ಲಿ 100 ಮಂದಿ ಮೀರಬಾರದು.
Related Articles
Advertisement
– ಇತರೆ ಸಮಾರಂಭಗಳಿಗೆ ಸಂಬಂಧಿಸಿದಂತೆ 50 ಮಂದಿ ಮೀರದಂತೆ, ಹಾಲ್‌ನ ವಿಸ್ತೀರ್ಣಕ್ಕೆ ಅನುಗುಣವಾಗಿ ಮಾತ್ರ ಅವಕಾಶ ಕಲ್ಪಿಸಬೇಕು. ಧಾರ್ಮಿಕ ಆಚರಣೆಗಳು ಹಾಗೂ ಸಮಾರಂಭಗಳನ್ನು ನಿಷೇಧಿಸಲಾಗಿದೆ. ರಾಜಕೀಯ ಆಚರಣೆಗಳು ಮತ್ತು ಸಮಾರಂಭಗಳನ್ನು ತೆರೆದ ಪ್ರದೇಶದಲ್ಲಿ ನಡೆಸಲು ಅನುಮತಿ ನೀಡಲಾಗಿದ್ದು 200 ಮಂದಿ ಮೀರಬಾರದು.
ಮೇಲ್ಕಂಡ ಸಂದರ್ಭಗಳಲ್ಲಿ ಜನರು ಕಡ್ಡಾಯವಾಗಿ ಸರಕಾರದ ಸಂಬಂಧಪಟ್ಟ ಇಲಾಖೆಗಳು ಹೊರಡಿಸಿರುವ ಪ್ರಮಾಣಿತ ಕಾರ್ಯ ವಿಧಾನವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಭಾಂಗಣ, ಕಲ್ಯಾಣ ಮಂಟಪ, ಸಿನಿಮಾ ಮಂದಿರ, ಹಾಲ್‌ಗಳು ಮತ್ತು ಆಚರಣೆಗಾಗಿ ಜನ ಸೇರುವ ಇತ್ಯಾದಿ ಪ್ರದೇಶಗಳ ಉಸ್ತುವಾರಿ ಹೊಂದಿರುವವರು ಕಡ್ಡಾಯವಾಗಿ ಸ್ಯಾನಿಟೈಸೇಷನ್ ಕ್ರಮಗಳನ್ನು ಅನುಸರಿಸಬೇಕು.
ಮೇಲ್ಕಂಡ ಅಂಶಗಳನ್ನು ಪಾಲಿಸುವ ಷರತ್ತಿನ ಮೇರೆಗೆ ನಿಯಮಾವಳಿಗಳನ್ನು ಅನುಸರಿಸಿ ತಮ್ಮ ವ್ಯಾಪ್ತಿಯಲ್ಲಿ ಸಮಾರಂಭಗಳು ಮತ್ತು ಆಚರಣೆಗಳಿಗೆ ಅನುಮತಿ ನೀಡುವ ಬಗ್ಗೆ ಆಯಾ ತಾಲೂಕಿನ ತಹಶೀಲ್ದಾರರು ಪರಿಶೀಲಿಸಿ, ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಆದೇಶ ಪಾಲನೆಯಲ್ಲಿ ಲೋಪವೆಸಗುವಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, ಭಾರತೀಯ ದಂಡ ಸಂಹಿತೆ ಹಾಗೂ ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳ ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.