Advertisement

ರಾಜ್ಯೋತ್ಸವ ಪ್ರಶಸ್ತಿಗೆ ಆನ್ ಲೈನ್ ಮೂಲಕ ಸಾರ್ವಜನಿಕರೇ ಸಾಧಕರನ್ನು ಶಿಫಾರಸ್ಸು ಮಾಡಬಹುದು

05:09 PM Sep 25, 2021 | Team Udayavani |

ಬೆಂಗಳೂರು: ನವೆಂಬರ್ ಒಂದರಂದು 66ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನು ರಾಜ್ಯ ಸರ್ಕಾರದಿಂದ ಆಚರಿಸಲಾಗುತ್ತಿದ್ದು, ಪ್ರತಿವರ್ಷದಂತೆ ಈ ವರ್ಷವೂ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು, ಈ ಬಾರಿ ವಿಶೇಷವಾಗಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಗುರುತಿಸಿ ಆನ್ ಲೈನ್ ಮೂಲಕ ಅವರ ಹೆಸರು ಶಿಫಾರಸು ಮಾಡಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

Advertisement

ಈ ವರ್ಷ 66 ಅರ್ಹ ಸಾಧಕರನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ. ಸಾರ್ವಜನಿಕರು ಯಾರೇ ಆಗಲಿ ಅವರು ಸೇವಾ ಸಿಂಧು ಪೋರ್ಟಲ್ ಮೂಲಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಸಿದ್ಧಪಡಿಸಲಾಗಿರುವ ವಿಶೇಷ ನಮೂನೆಯ ಅರ್ಜಿಯಲ್ಲಿ ಮೂರು ಹೆಸರುಗಳನ್ನು ಶಿಫಾರಸು ಮಾಡಬಹುದಾಗಿದೆ. ಈ ಮೂವರು ಸಾಧಕರುಗಳ ಹೆಸರು, ಅವರು ಯಾವ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ, ಅವರ ಊರು, ವಿಳಾಸ, ಸಂಪರ್ಕ ಸಂಖ್ಯೆಇತ್ಯಾದಿ ವಿವರಗಳನ್ನು ಒದಗಿಸಲು ಈ ಅರ್ಜಿ ನಮೂನೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಎಲೆಮರೆ ಕಾಯಿಯಂತೆ ತಮ್ಮ, ತಮ್ಮ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ, ಮಾಡುತ್ತಿರುವ ವ್ಯಕ್ತಿಗಳನ್ನು ಗುರುತಿಸಿ ಅವರ ಸಾಧನೆಯನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ನಮಗೆ ತಲುಪಿಸಿದರೆ, ಅದನ್ನು ತಜ್ಞರ ಸಮಿತಿಗೆ ನೀಡಲಾಗುತ್ತದೆ, ಅದನ್ನು ಅವರು ಪರಿಶೀಲನೆ ಮಾಡಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಎಂದು ಪರಿಗಣಿಸಿದರೆ ಖಂಡಿತ ಅವರಿಗೆ ಪ್ರಶಸ್ತಿ ಸಿಗುವಂತಾಗುತ್ತದೆ. ಅದರ ಜೊತೆಗೆ ಈ ಪ್ರತಿಷ್ಠಿತ ಪ್ರಶಸ್ತಿಗೆ ನೇರವಾಗಿ ಸಾರ್ವಜನಿಕರೇ ಸಾಧಕರನ್ನು ಆಯ್ಕೆ ಮಾಡಿದಂತಾಗುತ್ತದೆ, ಕ್ರೀಡೆ ಹೊರತುಪಡಿಸಿದರೆ ಉಳಿದ ಸಾಧಕರು ಕನಿಷ್ಠ 60 ವರ್ಷ ಮೇಲ್ಪಟ್ಟವರಾಗಿರಬೇಕು ಎಂದು ಸಚಿವ ಸುನಿಲ್ ಕುಮಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ರವಿವಾರ ಪಂಜಾಬ್ ನೂತನ ಸಚಿವ ಸಂಪುಟ ರಚನೆ: ಕ್ಯಾಪ್ಟನ್ ಆತ್ಮೀಯರಿಗೆ ಕೊಕ್ ಸಾಧ್ಯತೆ

ಇಂತಹ ಪ್ರಯೋಗ ಇದೇ ಮೊದಲ ಬಾರಿಗೆ ಮಾಡಲಾಗುತ್ತಿದ್ದು, ಇದು ಅತ್ಯಂತ ಪಾರದರ್ಶಕ ಹಾಗೂ ಪ್ರಜಾಪ್ರಭುತ್ವ ಸಿದ್ಧಾಂತಗಳಿಗೆ ಅನುಗುಣವಾಗಿ ನಡೆಯುತ್ತಿರುವುದು ವಿಶೇಷವಾಗಿದೆ ಎಂದು ಹೇಳಿದ್ದಾರೆ. ಸಾರ್ವಜನಿಕರು ತಮ್ಮ ಮೊಬೈಲ್ ಮೂಲಕವೂ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶಿಸಬಹುದಾಗಿದೆ, ತಾವು ಪ್ರಶಸ್ತಿಗೆ ಶಿಫಾರಸು ಮಾಡುವ ವ್ಯಕ್ತಿಗಳ ಹೆಸರನ್ನು ಕಳುಹಿಸಲು ಅಕ್ಟೋಬರ್ 15 ನೇ ತಾರೀಖಿನವರೆಗೂ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next