Advertisement

ಕಂಟೈನ್ಮೆಂಟ್ ಪ್ರದೇಶ ಹಾಗೂ ಕ್ವಾರೆಂಟೈನ್ ಶಾಲೆಗಳ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಬೇಕಿಲ್ಲ

08:18 PM Jun 08, 2020 | Hari Prasad |

ಬೆಂಗಳೂರು: ರಾಜ್ಯಾದ್ಯಂತ ಇದೀಗ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶೈಕ್ಷಣಿಕ ವರ್ಷದ ಪೂರ್ವಭಾವಿ ಚಟುವಟಿಕೆಗಳು ಜೂನ್ 5ರಿಂದ ಪ್ರಾರಂಭಗೊಂಡಿವೆ.

Advertisement

ಹಾಗಾಗಿ ಜೂನ್ 5ಕ್ಕೆ ಹಾಗೂ ಕೆಲವೊಂದು ಸೂಚಿತ ಪರಿಸ್ಥಿತಿಯಲ್ಲಿ ಜೂನ್ 8ರಂದು ರಾಜ್ಯದಲ್ಲಿನ ಎಲ್ಲಾ ಶಿಕ್ಷಕರೂ ತಮ್ಮ ತಮ್ಮ ಶಾಲೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಈ ಹಿಂದೆಯೇ ಸುತ್ತೋಲೆಯನ್ನು ಹೊರಡಿಸಿತ್ತು.

ಆದರೆ ಇದೀಗ ಈ ಸುತ್ತೋಲೆಯಲ್ಲಿನ ಅಂಶಗಳಿಗೆ ಕೆಲವೊಂದು ವಿನಾಯಿತಿಗಳನ್ನು ನೀಡಿ ಶಿಕ್ಷಣ ಇಲಾಖೆ ಮರು ಆದೇಶ ಹೊರಡಿಸಿದೆ.

ಇದರ ಪ್ರಕಾರ, ರಾಜ್ಯದಲ್ಲಿ ವಿವಿ‍ಧ ಪ್ರದೇಶಗಳನ್ನು ಕೋವಿಡ್ 19 ಸೋಂಕಿನ ಕಾರಣದಿಂದ ಕಂಟೈನ್ಮೆಂಟ್ ಪ್ರದೇಶ ಎಂದು ಘೋಷಿಸಲಾಗಿದೆ ಹಾಗೂ ರಾಜ್ಯದಲ್ಲಿನ ಹಲವಾರು ಶಾಲೆಗಳನ್ನು ಕ್ವಾರೆಂಟೈನ್ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿದೆ.

ಹಾಗಾಗಿ ಕಂಟೈನ್ಮೆಂಟ್ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಹಾಗೂ ಕ್ವಾರೆಂಟೈನ್ ಕೇಂದ್ರಗಳನ್ನಾಗಿ ಬಳಸಿಕೊಳ್ಳಲಾಗುತ್ತಿರುವ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗುವುದಕ್ಕೆ ಸಂಬಂಧಿಸಿದಂತೆ ಈ ಕೆಳಕಂಡ ಕ್ರಮಗಳಿಗೆ ಸೂಚಿಸಲಾಗಿದೆ.

Advertisement

1. ಸಂಬಂಧಿಸಿದ ಪ್ರದೇಶವನ್ನು ಕಂಟೈನ್ಮೆಂಟ್ ಪ್ರದೇಶದಿಂದ ಸಡಿಲಗೊಳಿಸುವವರೆಗೆ ಕಂಟೈನ್ಮೆಂಟ್ ಪ್ರದೇಶದ ಅಡಿಯಲ್ಲಿ ಬರುವ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ.

2. ಕ್ವಾರೆಂಟೈನ್ ಕೇಂದ್ರಗಳನ್ನಾಗಿ ಬಳಸಿಕೊಳ್ಳಲಾಗುತ್ತಿರುವ ರಾಜ್ಯದ ವಿವಿಧ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವ ಶಿಕ್ಷಕರು ಸಂಬಂಧಿಸಿದ ಶಾಲೆಯನ್ನು ಕ್ವಾರೆಂಟೈನ್ ಕೇಂದ್ರದಿಂದ ಮುಕ್ತಗೊಳಿಸುವವರೆಗೆ ಕರ್ತವ್ಯಕ್ಕೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ.

3. ಕಂಟೈನ್ಮೆಂಟ್ ಪ್ರದೇಶ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಶಿಕ್ಷಕರು ಸಂಬಂಧಿಸಿದ ಪ್ರದೇಶವನ್ನು ಕಂಟೈನ್ಮೆಂಟ್ ಪ್ರದೇಶದಿಂದ ಸಡಿಲಗೊಳಿಸುವವರೆಗೆ ಕರ್ತವ್ಯಕ್ಕೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ.

4. ಬಿಬಿಎಂಪಿ/ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯಿಂದ ಈ ಮೇಲೆ ತಿಳಿಸಿದಂತಹ ಶಾಲೆಗಳನ್ನು ಕಂಟೈನ್ಮೆಂಟ್ ಪ್ರದೇಶ ಹಾಗೂ ಕ್ವಾರೆಂಟೈನ್ ಕೇಂದ್ರದಿಂದ ಮುಕ್ತಗೊಳಿಸಿದ ನಂತರ ಶಾಲೆಗಳ ಪುನರಾರಂಭದ ಕುರಿತು ಈ ಹಿಂದಿನ ಉಲ್ಲೇಖ (1)ರಲ್ಲಿ ತಿಳಿಸಲಾಗಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next