Advertisement

ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶವಿಲ್ಲ : ಜಿಲ್ಲಾಧಿಕಾರಿ ಆದೇಶ

04:22 PM Oct 15, 2020 | sudhir |

ಮೈಸೂರು: ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲು ಇನ್ನೆರಡು ದಿನ ಬಾಕಿ ಇದ್ದು, ಕೋವಿಡ್‌-19 ಮುನ್ನೆಚ್ಚರಿಕೆ
ಕ್ರಮವಾಗಿ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ
ಸಿಂಧೂರಿ ಆದೇಶ ಹೊರಡಿಸಿದ್ದಾರೆ.

Advertisement

ದಸರಾ ಮುಗಿಯುವವರೆಗೂ 2 ಹಂತಗಳಲ್ಲಿ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧ ಮಾಡಿಆದೇಶಹೊರಡಿಸಲಾಗಿದೆ. ಅ.14ರಿಂದ 18ರವರೆಗೆ ಸಾರ್ವಜನಿಕರಿಗೆ ಚಾಮುಂಡಿಬೆಟ್ಟಕ್ಕೆ ಪ್ರವೇಶವಿರುವುದಿಲ್ಲ. 2ನೇ ಹಂತದಲ್ಲಿ ಅ.23 ರಿಂದ ನ.1ರವರೆಗೂ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ. ಅ.17 ರಂದು ದಸರಾ ಉದ್ಘಾಟನೆಗೆ ಆಹ್ವಾನಿತರಿಗೆ ಮಾತ್ರ ಚಾಮುಂಡಿಬೆಟ್ಟಕ್ಕೆ ಪ್ರವೇಶ ಕಲ್ಪಿಸಲಾಗಿದೆ.ಅ.15 ರಿಂದ ದಸರಾ ಉದ್ಘಾಟನೆಗೆ ಜಿಲ್ಲಾಡಳಿತ ವತಿಯಿಂದ ಪೂರ್ವ ಸಿದ್ಧತೆ ನಡೆಸಲಾಗುತ್ತಿದ್ದು, ಪೂರ್ವ ಸಿದ್ಧತೆ ವೇಳೆ, ಸಿದ್ಧತೆಯಲ್ಲಿ ತೊಡಗಿಸಿಕೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಾತ್ರ ಪ್ರವೇಶಕ್ಕೆ ಅವಕಾಶಕಲ್ಪಿಸಲಾ ಗಿದೆ. ಗ್ರಾಮಸ್ಥರು ಹೊರತುಪಡಿಸಿ, ಖಾಸಗಿ ವಾಹನಗಳಿಗೆ ಚಾಮುಂಡಿ ಬೆಟ್ಟಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶಿಸಿದ್ದಾರೆ. ಹೆಚ್ಚಿನ ಭಕ್ತರು ಭಾಗವಹಿಸುವುದರಿಂದ ಕೊರೊನಾ ಹರಡುವ ಸಾಧ್ಯತೆ ಹೆಚ್ಚಿರುತ್ತದೆ.

ಇದನ್ನೂ ಓದಿ:ಹತ್ರಾಸ್‌ ಪ್ರಕರಣ: ಚಿತ್ರೀಕರಣ ನಡೆಸದ ಪೊಲೀಸರು; ಆಸ್ಪತ್ರೆಯ ಸಿಸಿಟಿವಿ ದೃಶ್ಯಾವಳಿಯೂ ಇಲ್ಲ

ಅ.17ರಂದು ಮೈಸೂರು ದಸರಾ ಉದ್ಘಾಟನೆಯಾಗಲಿದೆ. ಈ ಬಾರಿ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ. ಮಂಜುನಾಥ್‌ ದಸರಾ ಉದ್ಘಾಟನೆ ಮಾಡಲಿದ್ದಾರೆ. ಬೆಟ್ಟದಲ್ಲಿ ನಡೆಯಲಿರುವ ಉದ್ಘಾಟನೆಯಲ್ಲಿ 200 ಜನರಿಗೆ ಮಾತ್ರ ಅವಕಾಶ ನೀಡಲು ಸೂಚಿಸಲಾಗಿದೆ. ಕೊರೊನಾ ಭೀತಿಯಿಂದಾಗಿ ಈ ಬಾರಿ ದಸರಾದ ಕೊನೇ ದಿನ ನಡೆಯುವ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಕೇವಲ 300 ಜನರಿಗೆ ಅವಕಾಶ ನೀಡಬೇಕೆಂದು ಶಿಫಾರಸು ಮಾಡಲಾಗಿದೆ. ಅ. 17ರಿಂದ ಅ. 26ರವರೆಗೆ ಮೈಸೂರುಅರಮನೆಯಲ್ಲಿ ದಸರಾಮಹೋತ್ಸವ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next