Advertisement

ಉಡುಪಿ ಜಿಲ್ಲೆಯ ಬೀಚ್ ಗಳಿಗೆ ಸಾರ್ವಜನಿಕ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ

04:19 PM Dec 31, 2020 | Team Udayavani |

ಉಡುಪಿ: ಹೊಸ ವರ್ಷಾಚರಣೆಯ ಸಂದರ್ಭ ರೂಪಾಂತರಿತ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಬೀಚ್ ಗಳಿಗೆ ಡಿ.31ರ ಸಂಜೆ 6ರಿಂದ ಜ.1ರ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಆದೇಶಿಸಿದ್ದಾರೆ.

Advertisement

ಈ ಬಗ್ಗೆ ಫೇಸ್ ಬುಕ್ ವಿಡಿಯೋದಲ್ಲಿ ಮಾಹಿತಿ ನೀಡಿರುವ ಅವರು, ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಪಾಲಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಇದೇ ಕ್ರಮವಾಗಿ ಜಿಲ್ಲೆಯ ಬೀಚ್ ಗಳಿಗೆ ಡಿ.31ರ ಸಂಜೆ 6ರಿಂದ ಜ.1ರ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರು ತೆರಳುವಂತಿಲ್ಲ. ಬೀಚ್ ಗಳಲ್ಲಿ ಪೊಲೀಸ್ ಕಾವಲು ಹೆಚ್ಚಿಸಲಾಗುವುದು ಎಂದರು.

ಇದನ್ನೂ ಓದಿ:ಮಕ್ಕಳ ಸುರಕ್ಷತೆ ಜವಾಬ್ದಾರಿ ನಮ್ಮದು, ಧೈರ್ಯವಾಗಿ ಶಾಲೆಗೆ ಕಳಿಸಿ: ಸುರೇಶ್ ಕುಮಾರ್ ಮನವಿ

ಕೋವಿಡ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಬಾರಿ ಸಾರ್ವಜನಿಕವಾಗಿ ಹೊಸ ವರ್ಷಾಚರಣೆಯನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಂಭ್ರಮಾಚರಣೆಯನ್ನು ನಿಷೇಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next