Advertisement
ಕಲಬುರಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಅವರು “ನಾನು ಖುದ್ದಾಗಿ ತೆಲಂಗಾಣಕ್ಕೆ ಭೇಟಿ ನೀಡಿದ್ದೇನೆ. 10 ವರ್ಷದ ಕೆಸಿಆರ್ ಆಡಳಿತದಲ್ಲಿ 10 ಸ್ಕ್ಯಾಮ್ ಗಳಲ್ಲಿ 10 ಲಕ್ಷ ಕೋಟಿ ಭ್ರಷ್ಟಾಚಾರ ನಡೆದಿದೆ. ಕಾಲೇಶ್ವರಂ ನೀರಾವರಿ ಯೋಜನೆಯೊಂದರಲ್ಲೇ 1.50 ಲಕ್ಷ ಕೋಟಿ ಅವ್ಯವಹಾರ ಆಗಿರುವ ಬಗ್ಗೆ ಅಲ್ಲಿನ ಜನರೇ ಮಾತನಾಡಿಕೊಳ್ಳುತ್ತಿದ್ದರು. ಇದನ್ನು ಮನಗಂಡ ಜನರು ತೆಲಂಗಾಣ ಉಳಿಯಬೇಕಾದರೆ ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ ಎಂದು ನಮಗೆ ಆಶೀರ್ವಾದ ಮಾಡಿದ್ದಾರೆ” ಎಂದರು.
Related Articles
Advertisement
ಛತ್ತೀಸ್ ಗಡ್ ರಾಜ್ಯದಲ್ಲಿ ಸೀಟು ಕಡಿಮೆ ಬಂದಲ್ಲಿ ರೆಸಾರ್ಟ್ ರಾಜಕಾರಣ ಪ್ರಾರಂಭವಾಗುತ್ತದಯೇ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ಅದು ಅನಿವಾರ್ಯವಾಗುತ್ತದೆ. ನಾವು ಬೇರೆ ಶಾಸಕರನ್ನು ಖರೀದಿಸುವುದಿಲ್ಲ ಆದರೆ ನಮ್ಮ ಶಾಸಕರನ್ನು ರಕ್ಷಿಸಿಕೊಳ್ಳುತ್ತೇವೆ. ರಾಜ್ಯದಲ್ಲಿ ರೆಸಾರ್ಟ್ ರಾಜಕೀಯ ಹಾಗೂ ಆಪರೇಷನ್ ಕಮಲ ಪ್ರಾರಂಭ ಮಾಡಿದ್ದೆ ಬಿಜೆಪಿ. ಎಷ್ಟೇ ಸಂಖ್ಯಾಬಲ ಇದ್ದರು ಸರ್ಕಾರವನ್ನು ನಾವೇ ಮಾಡುತ್ತೇವೆ ಎಂದು ಹೇಳುತ್ತಾರಲ್ಲ ಯಾವ ಆಧಾರದ ಮೇಲೆ ಹೇಳುತ್ತಾರೆ ಎಂದು ಹರಿಹಾಯ್ದರು.
ಕಾಂಗ್ರೆಸ್ ಪಕ್ಷಕ್ಕೆ ಆಪರೇಷನ್ ಕಮಲದ ಯಾವುದೇ ಆತಂಕ ಇಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು ಬಿಜೆಪಿಯವರು ಅಧಿಕಾರಕ್ಕಾಗಿ ರಂಗೋಲಿ ಕೆಳಗೆ ನುಗ್ಗುತ್ತಾರೆ. ಹಣಬಲ ತೋಳ್ಬಲ ಬಳಸಿ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತದೆ ಎಂದು ಛಾಟಿ ಬೀಸಿದರು.