Advertisement

ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡಿದವರಿಂದಲೇ ನಷ್ಟ ವಸೂಲಿ: ಬಸವರಾಜ ಬೊಮ್ಮಾಯಿ

06:02 PM Aug 12, 2020 | Nagendra Trasi |

ಬೆಂಗಳೂರು: ಕೆಜಿ ಹಳ್ಳಿ, ಡಿಜೆ ಹಳ್ಳಿಯಲ್ಲಿ ಗಲಾಟೆ ನೆಪದಲ್ಲಿ ಸಾರ್ವಜನಿಕ ಆಸ್ತಿ, ಪಾಸ್ತಿಗೆ ಹಾನಿ ಮಾಡಿದವರಿಂದಲೇ ನಷ್ಟ ವಸೂಲಿ ಮಾಡಲಾಗುವುದು. ಈ ಬಗ್ಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಂತೆಯೇ ಕರ್ನಾಟಕ ಸರ್ಕಾರ ಕಾರ್ಯಪ್ರವೃತ್ತವಾಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಾಗಲೇ ಡಿಜೆ ಹಳ್ಳಿ ಮತ್ತು ಕೆಜಿಹಳ್ಳಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿಸಿಟಿವಿ ಫೂಟೇಜ್ ಪರಿಶೀಲಿಸಿ ಗುರುತು ಪತ್ತೆ ಹಚ್ಚುವ ಕೆಲಸದಲ್ಲಿ ತೊಡಗಿದ್ದಾರೆ. ಅಷ್ಟೇ ಅಲ್ಲ ಸಾರ್ವಜನಿಕ ಆಸ್ತಿ, ಪಾಸ್ತಿ ನಷ್ಟ ಮಾಡಿದ್ದ ಅವರಿಂದ ಹಣ ವಸೂಲಿ ಮಾಡಲಾಗುವುದು ಎಂದು ಹೇಳಿದರು.

ಘಟನೆ ಸಂಬಂಧ ಈಗಾಗಲೇ 140 ಜನರನ್ನು ಬಂಧಿಸಿದ್ದು, ಅವರಿಂದಲೇ ನಷ್ಟ ಭರಿಸಲಾಗುವುದು. ಈ ಪ್ರಕರಣದಲ್ಲಿ ಯಾರ ಒತ್ತಡಕ್ಕೂ ಮಣಿಯದೇ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

ನಿನ್ನೆ ರಾತ್ರಿ ನಡೆದ ಘಟನೆ ಅಕ್ಷಮ್ಯ ಅಪರಾಧ. ಪೊಲೀಸರು ಅಶ್ರುವಾಯು ಪ್ರಯೋಗ ಹಾಗೂ ಫೈರಿಂಗ್ ಮೂಲಕ ಗಲಾಟೆಯನ್ನು ನಿಯಂತ್ರಿಸಿದ್ದಾರೆ. ಈ ಗಲಾಟೆಗೆ ರಾಜಕೀಯ ಕಾರಣವೂ ಇದ್ದಿರುವ ಬಗ್ಗೆ ಮಾಹಿತಿ ಬಂದಿದ್ದು, ಈ ದಿಕ್ಕಿನಲ್ಲಿಯೂ ತನಿಖೆ ನಡೆಯುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next