ಬೆಂಗಳೂರು: “ಮಂಗಳೂರು ಸ್ಫೋಟ ಪ್ರಕರಣದಿಂದ ನಾವು ಪಾಠ ಕಲಿಯಬೇಕಿದೆ. ನಿಮ್ಮ ಆಧಾರ್ ಕಾರ್ಡ್ ಕಳೆದುಕೊಳ್ಳದಂತೆ ಎಚ್ಚರಿಕೆ ವಹಿಸಿ’ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.
ಟ್ವಿಟರ್‌ನಲ್ಲಿ ಟ್ವೀಟ್ ಮಾಡಿರುವ ಅವರು, ಒಂದು ವೇಳೆ ನಿಮ್ಮ ಆಧಾರ್ ಕಾರ್ಡ್ ಕಳೆದುಕೊಂಡರೆ ಕೂಡಲೇ ಪೊಲೀಸ್ ಠಾಣೆಗೆ ದೂರು ನೀಡಿ ಅಥವಾ ಇ-ಲಾಸ್ಟ್ ಆ್ಯಪ್ ಮೂಲಕ ದೂರು ದಾಖಲಿಸಬೇಕು. ಜತೆಗೆ ಆಧಾರ್ ಸಂಖ್ಯೆ ನೀಡುವ ವಿಶಿಷ್ಟ ಗುರುತು ಪ್ರಾಧಿಕಾರ(ಯುಐಡಿಎಐ)ಗೆ ಭೇಟಿ ನೀಡಿ ಲಾಕ್ ಮತ್ತು ಅನ್‌ಲಾಕ್ ಮಾಡುವ ಆಯ್ಕೆ ಬಳಸಿಕೊಳ್ಳಿ. ಜತೆಗೆ ಮನೆಗಳನ್ನು ಬಾಡಿಗೆ ಕೊಡುವ ಮೊದಲು ಬಾಡಿಗೆದಾರರ ಸಂಪೂರ್ಣ ಮಾಹಿತಿಯನ್ನು ಮನೆ ಮಾಲೀಕರು ಪಡೆದುಕೊಳ್ಳಬೇಕು.
ಮನೆಯ ಅಕ್ಕ ಪಕ್ಕ ಏನು ನಡೆಯುತ್ತಿದೆ ಎಂಬ ಬಗ್ಗೆ ಮಾಹಿತಿ ತಿಳಿದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ.