ಶಿಮ್ಲಾ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಭರ್ಜರಿ ಗೆಲುವು ಸಾಧಿಸಿದ ಬಳಿಕ ರಾಹುಲ್ ಗಾಂಧಿ ಮುಂದಿನ ಪ್ರಧಾನಿ ಹುದ್ದೆ ಅಭ್ಯರ್ಥಿ ಎಂಬ ಮಾತುಗಳು ಕೇಳಿ ಬರುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ‘ಈ ಬಗ್ಗೆ ಜನರು ತೀರ್ಮಾನ ಮಾಡುತ್ತಾರೆ’ ಎಂದರು.
ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಪ್ರಧಾನಿ ನರೇಂದ್ರ ಮೋದಿ ವಿರುದ್ಧದ ಜನಾದೇಶ ಎಂದು ಬಣ್ಣಿಸಿದ ಸಿದ್ದರಾಮಯ್ಯ, ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಇದು “ಮೆಟ್ಟಿಲು” ಎಂದು ಹೇಳಿದರು.
“ಈ ಚುನಾವಣೆಯ ಫಲಿತಾಂಶವು ಲೋಕಸಭೆ ಚುನಾವಣೆಗೆ ಮೆಟ್ಟಿಲು, ಎಲ್ಲಾ ಬಿಜೆಪಿಯೇತರ ಪಕ್ಷಗಳು ಒಗ್ಗೂಡಿ ಬಿಜೆಪಿಯನ್ನು ಸೋಲಿಸಬೇಕೆಂದು ನಾನು ಭಾವಿಸುತ್ತೇನೆ. ರಾಹುಲ್ ಗಾಂಧಿ ದೇಶದ ಪ್ರಧಾನಿಯಾಗಬಹುದು ಎಂದು ನಾನು ಭಾವಿಸುತ್ತೇನೆ” ಎಂದು ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ:9 ದಿನದಲ್ಲಿ 100 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ದಾಖಲೆ ಬರೆದ The Kerala Story
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 224 ಸ್ಥಾನಗಳಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಬಿಜೆಪಿ 66 ಸ್ಥಾನಗಳಿಗೆ ತೃಪ್ತಿ ಪಟ್ಟಿದೆ.
ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಬೇಕು ಎಂಬ ಹೆಚ್ಚುತ್ತಿರುವ ಮಾತುಗಳ ಕುರಿತು ಹೇಳಿದ ಪ್ರಿಯಾಂಕಾ ಗಾಂಧಿ ವಾದ್ರಾ, “ನಾನು ಹೇಳಿದಂತೆ, ಇದು (ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವುದು) ದೊಡ್ಡ ಜವಾಬ್ದಾರಿಯಾಗಿದೆ, ನಾವು ಕೆಲವು ಭರವಸೆಗಳೊಂದಿಗೆ ಜನರ ಬಳಿಗೆ ಹೋಗಿದ್ದೇವೆ ಮತ್ತು ಅವುಗಳನ್ನು ಈಡೇರಿಸಬೇಕು. ನಾವು ಜನರಿಗಾಗಿ ಕೆಲಸ ಮಾಡಬೇಕು, ಮುಂದೆ ಏನಾಗುತ್ತದೆ ಎಂದು ಸಾರ್ವಜನಿಕರೇ ಹೇಳುತ್ತಾರೆ” ಎಂದರು.