Advertisement

ಒಂದೇ ಹಂತದಲ್ಲಿ ಪಟ್ಟಿ ಪ್ರಕಟ

07:00 AM Apr 07, 2018 | Team Udayavani |

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಒಂದೇ ಹಂತದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು  ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. 8ರಂದು ನಗರದ ಅರಮನೆ ಮೈದಾನದಲ್ಲಿ ನಡೆಯುವ ರಾಹುಲ್‌ ಗಾಂಧಿ ಜನಾಶೀರ್ವಾದ ಯಾತ್ರೆಯ ಪೂರ್ವ ಸಿದ್ಧತಾ ಕಾರ್ಯ ಪರಿಶೀಲಿಸಿ ಮಾತನಾಡಿದ ಅವರು, ಬಹುತೇಕ ಹಾಲಿ ಶಾಸಕರಿಗೆ ಟಿಕೆಟ್‌ ನೀಡಲಾಗುವುದು ಎಂದು ಹೇಳಿದರು.

Advertisement

224 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ. ಏಪ್ರಿಲ್‌ 2ನೇ ವಾರದಲ್ಲಿ ಒಂದೇ ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡಲಾಗುವುದು. ಅಪ್ಪ ಮಕ್ಕಳಿಗೆ ಟಿಕೆಟ್‌ ನೀಡುವ ವಿಚಾರದಲ್ಲಿ ಕೇಂದ್ರ ಚುನಾವಣಾ ಸಮಿತಿ ತೀರ್ಮಾನ ಮಾಡಲಿದೆ. ಯಾರು ಗೆಲ್ಲುವ ಸಾಮರ್ಥಯ ಹೊಂದಿದ್ದಾರೆ ಅವರಿಗೆ ಟಿಕೆಟ್‌ ದೊರೆಯಲಿದೆ ಎಂದರು. ಅಂಬರೀಶ್‌ ಹಾಲಿ ಶಾಸಕರಾಗಿದ್ದಾರೆ. ಅವರಿಗೂ ಟಿಕೆಟ್‌ ದೊರೆಯುತ್ತದೆ. ಅವರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆಂದು ಪರಮೇಶ್ವರ್‌ ಹೇಳಿದರು.

ಶಿವಮೂರ್ತಿ ನಾಯಕ್‌ ಭೇಟಿ: ಮಾಯಕೊಂಡ ಶಾಸಕ ಶಿವಮೂರ್ತಿ ನಾಯಕ್‌ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌
ಅವರನ್ನು ಭೇಟಿ ಮಾಡಿ ತಮಗೆ ಟಿಕೆಟ್‌ ನೀಡುವಂತೆ ಮನವಿ ಮಾಡಿದ್ದಾರೆ. ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, “ಮಾಯಕೊಂಡ ಕ್ಷೇತ್ರದಲ್ಲಿ ತಮ್ಮ ವಿರುದಟಛಿ ಪಿತೂರಿ ಮಾಡಿ ಟಿಕೆಟ್‌ ತಪ್ಪಿಸುವ ಪ್ರಯತ್ನ ನಡೆದಿದೆ. ಹಿಂದೆ ಸಚಿವ ಸ್ಥಾನವನ್ನೂ ತಪ್ಪಿಸಲಾಯಿತು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‌ ಅವರ ಗಮನಕ್ಕೆ ತಂದಿದ್ದೇನೆ. ನನಗೆ ಸಮೀಕ್ಷೆಗಳ ಮೇಲೆ ನಂಬಿಕೆ ಇಲ್ಲ. ನನಗೆ ಟಿಕೆಟ್‌ ಸಿಗುವ ಭರವಸೆ ಇದೆ’ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next