Advertisement
ಗುರುವಾರ ಕನ್ನಡ ಭವನದ ನಯನ ಸಭಾಂಗಣದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಹಮ್ಮಿಕೊಂಡಿದ್ದ ಅಂತರ್ಜಾಲದಲ್ಲಿ ಪುಸ್ತಕ ಮಾರಾಟ ವ್ಯವಸ್ಥೆ ಉದ್ಘಾಟನೆ, ಉಚಿತ ಪುಸ್ತಕ ವಿತರಣೆ, ವಿದ್ಯಾರ್ಥಿಗಳಿಗೆ ರಸಪ್ರಶೆ,°ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
Related Articles
Advertisement
“ಥಟ್ ಅಂತ ಹೇಳಿ’ ಖ್ಯಾತಿಯ ಡಾ.ನಾ.ಸೋಮೇಶ್ವರ ಮಾತನಾಡಿ, ಓದಿದ್ದೆಲ್ಲಾ ಅರ್ಥವಾಗದೇ ಇರಬಹುದು. ಆದರೆ, ಗೊತ್ತಿಲ್ಲದಿರುವ ಅದೇಷ್ಟೋ ಸಂಗತಿಗಳನ್ನು ಓದಿನಿಂದ ತಿಳಿದುಕೊಳ್ಳಬಹುದು.
ಆದ್ದರಿಂದ ಯಾವುದೇ ಪುಸ್ತಕ ಸಂಪರ್ಕಕ್ಕೆ ಬಂದರೂ ಅದನ್ನು ಓದಬೇಕು. ಅರಿವು ಎಷ್ಟು ವಿಶಾಲವಾಗಿದೆ ಎಂದರೆ ಅದನ್ನು ತಿಳಿಯಲು ಒಂದು ಜನ್ಮ ಸಾಕಾಗುವುದಿಲ್ಲ. ಹಾಗಾಗಿ ಎಷ್ಟು ಸಾಧ್ಯವೋ ಅಷ್ಟು ಓದುವ, ತಿಳಿದುಕೊಳ್ಳುವ ತ್ಸಾಹ ಹೊಂದಬೇಕು ಎಂದರು.
ಕನ್ನಡ ಪುಸ್ತಕ ಪ್ರಾಧಿಕಾರ ಹಮ್ಮಿಕೊಂಡಿದ್ದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಬೆಂಗಳೂರಿನ 16 ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಡಾ.ನಾ.ಸೋಮೇಶ್ವರ ಅವರು ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. ಇದೇ ವೇಳೆ ಪ್ರಾಧಿಕಾರದ 600 ಶೀರ್ಷಿಕೆಗಳ ಪುಸ್ತಕಗಳನ್ನು ಅಂತರ್ಜಾಲದಲ್ಲಿ ಮಾರಾಟ ಮಾಡುವ ವ್ಯವಸ್ಥೆಗೆ ಚಾಲನೆ ನೀಡಲಾಯಿತು.
ಪುಸ್ತಕ ಇರುವುದು ಪೂಜೆಗಲ್ಲ: ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಮಾತನಾಡಿ, ಪುಸ್ತಕಗಳಿಗೆ ಸರಸ್ವತಿ ಸ್ಥಾನ ನೀಡಲಾಗಿದೆ. ಹಾಗಂತಾ ಅವುಗಳಿಗೆ ದಿನವೂ ಪೂಜೆ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ.
ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ. ಕಲಿಯಲು ವಯಸ್ಸಿನ ಭೇದವಿಲ್ಲ. ಆಯಾ ಕಾಲಘಟ್ಟದಲ್ಲಿ ಆಗುವ ಬದಲಾವಣೆಗೆ ತಕ್ಕಂತೆ ನಾವು ಹೊಂದಿಕೊಂಡು ಹೋಗಬೇಕು. ಈ ನಿಟ್ಟಿನಲ್ಲಿ ಅಂತರ್ಜಾಲದಲ್ಲಿ ಪುಸ್ತಕ ಮಾರಾಟ ವ್ಯವಸ್ಥೆಗೆ ಮುಂದಾಗಿರುವ ಪುಸ್ತಕ ಪ್ರಾಧಿಕಾರದ ಕ್ರಮ ಸ್ವಾಗತಾರ್ಹ ಎಂದು ಹೇಳಿದರು.