Advertisement

ಪಿಯುಸಿ: 23 ಸಾವಿರ ವಿದ್ಯಾರ್ಥಿಗಳು ಗೈರು; ಸುಗಮವಾಗಿ ನಡೆದ ಇಂಗ್ಲಿಷ್‌ ಪರೀಕ್ಷೆ

12:58 AM Jun 19, 2020 | Sriram |

ಬೆಂಗಳೂರು: ಕೋವಿಡ್ ಆತಂಕ ಮತ್ತು ಗೊಂದಲದ ನಡುವೆ ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆ ಗುರುವಾರ ನಡೆದಿದ್ದು, ಸುಮಾರು 23 ಸಾವಿರ ವಿದ್ಯಾರ್ಥಿಗಳು ಗೈರಾಗಿದ್ದಾರೆ.

Advertisement

ಇಂಗ್ಲಿಷ್‌ ಪರೀಕ್ಷೆಗೆ ಗೈರಾದ ಎಲ್ಲ ವಿದ್ಯಾರ್ಥಿಗಳಿಗೂ ಪೂರಕ ಪರೀಕ್ಷೆಯಲ್ಲಿ ಭಾಗಿಯಾಗಲು ಪಿಯು ಶಿಕ್ಷಣ ಇಲಾಖೆ ಅವಕಾಶ ನೀಡಿದೆ. ಇವರನ್ನು ರೆಗ್ಯುಲರ್‌ ವಿದ್ಯಾರ್ಥಿಗಳು ಎಂದೇ ಪರಿಗಣಿಸಲಾಗುತ್ತದೆ ಎಂದು ಇಲಾಖೆ ಈಗಾಗಲೇ ಸ್ಪಷ್ಟಪಡಿಸಿದೆ.

ಇಂಗ್ಲಿಷ್‌ ಪರೀಕ್ಷೆಗೆ ಕಲೆ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಿಂದ ಒಟ್ಟು 5,96,300 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇವರಲ್ಲಿ 5,72,665 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಬರೆದಿದ್ದಾರೆ. 23,635 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿದ್ದರೂ ಹೊರಗೆ ಹಲವೆಡೆ ಈ ನಿಯಮವನ್ನು ಗಾಳಿಗೆ ತೂರಲಾಗಿತ್ತು. ವಿವಿಧ ಅನಾರೋಗ್ಯ ಇದ್ದ 20 ವಿದ್ಯಾರ್ಥಿಗಳು ಪ್ರತ್ಯೇಕವಾಗಿ ಪರೀಕ್ಷೆ ಬರೆದಿದ್ದಾರೆ.

ಗೈರು ಹಾಜರಿಗೆ ಕಾರಣ ಗುರುತಿಸಿ ಮುಂದೆ ಅವರು ಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು.
– ಸುರೇಶ್‌ ಕುಮಾರ್‌
ಶಿಕ್ಷಣ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next