Advertisement

ಪಿಯುಸಿ ಪರೀಕ್ಷೆ:  ಜೂ.18ರಂದು ನಿಷೇಧಾಜ್ಞೆ

10:13 AM Jun 13, 2020 | sudhir |

ಮಂಗಳೂರು/ಉಡುಪಿ: ಕೋವಿಡ್ ಸಾಂಕ್ರಾಮಿಕ ರೊಗದಿಂದಾಗಿ ಮುಂದೂಡಲಾಗಿದ್ದ 2020 ರ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಇಂಗ್ಲೀಷ್‌ ಭಾಷಾ ಪರೀಕ್ಷೆಯನ್ನು ಜೂ.18ರಂದು ನಡೆಸಲಾಗುತ್ತಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು
ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸೂಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದ.ಕ. ಜಿಲ್ಲೆಯ ಎಲ್ಲ 51 ಮತ್ತು ಉಡುಪಿ ಜಿಲ್ಲೆಯ 21 ಪರೀಕ್ಷಾ ಕೇಂದ್ರಗಳ 200 ಮೀಟರ್‌ ಸುತ್ತ-
ಮುತ್ತಲಿನ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರನ್ವಯ ನಿಷೇಧಿತ ಪ್ರದೇಶವೆಂದು ಘೋಷಿಸಿ ದ.ಕ. ಮತ್ತು ಉಡುಪಿ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ.

Advertisement

ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200 ಮೀಟರ್‌ ವ್ಯಾಪ್ತಿಯಲ್ಲಿರುವ ಜೆರಾಕ್ಸ್‌ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ನಿಷೇಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next