Advertisement
ದ್ವಿತೀಯ ಪಿಯುಸಿ ಪರೀಕ್ಷೆಯು ಏ.16ರಿಂದ ಮೇ 4ರ ವರೆಗೆ ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಎಲ್ಲಾ ಪರೀಕ್ಷೆಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಲಿವೆ ಪೋಷಕರು ಹಾಗೂ ವಿದ್ಯಾರ್ಥಿಗಳು ಫೆ.1ರ ವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಿದೆ. ಆಕ್ಷೇಪಣೆಗಳನ್ನು ಸಲ್ಲಿಸಲು ಇ-ಮೇಲ್ ವಿಳಾಸ jdexam.dpue@gmail.com ಮೂಲಕ ಕಳುಹಿಸಬಹುದಾಗಿದೆ.
ಜಿಲ್ಲಾ ಉಪ ನಿರ್ದೇಶಕರ ನೇತೃತ್ವದಲ್ಲಿಯೇ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ ಮಾ.28ರಿಂದ ಏ.13ರ ವರೆಗೆ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸುವಂತೆ ಪಿಯು ಇಲಾಖೆ ನಿರ್ದೇಶಕಿ ಆರ್. ಸ್ನೇಹಲ್ ಆದೇಶ ಹೊರಡಿಸಿದ್ದಾರೆ.
Related Articles
ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಹಾಗೂ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ನಂತರ ವಿವಿಧ ವೃತ್ತಿಪರ ಕೋರ್ಸುಗಳ ದಾಖಲಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಹಿತದೃಷ್ಟಿಯಿಂದ ಪಠ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿತ್ತು. ಅದರಂತೆಯೇ ಪರೀಕ್ಷೆ ನಡೆಸಲಾಗುತ್ತಿದೆ. 2021-22ನೇ ಸಾಲಿನಲ್ಲಿ ಭಾಷಾ ವಿಷಯದಲ್ಲಿ ಕಡಿತಗೊಳಿಸಿರುವ ಶೇ.30ರಷ್ಟು ಪಠ್ಯಕ್ರಮವನ್ನು ಹೊರತುಪಡಿಸಿ ಉಳಿದ ಶೇ.70ರಷ್ಟು ಪಠ್ಯಕ್ರಮಕ್ಕೆ ಮಾತ್ರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಪಿಯು ಇಲಾಖೆಯು ಸ್ಪಷ್ಟಪಡಿಸಿದೆ.
Advertisement
ಆದರೆ, ಐಚ್ಛಿಕ ವಿಷಯಗಳ ಪಠ್ಯಕ್ರಮದಲ್ಲಿ ಯಾವುದೇ ಕಡಿತವಿಲ್ಲದೆ ಶೇ.100ರಷ್ಟು ಪಠ್ಯಕ್ರಮಕ್ಕೆ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಖುಷಿಯ ವಿಚಾರವೆಂದರೆ, ಐಚ್ಛಿಕ ವಿಷಯಗಳಲ್ಲಿ ಪ್ರಶ್ನೆಪತ್ರಿಕೆ ತಯಾರಿಸುವ ವೇಳೆ ಹೆಚ್ಚು ಸಂಖ್ಯೆಯಲ್ಲಿ ಆಯ್ಕೆ ಪ್ರಶ್ನೆಗಳನ್ನು ನೀಡಿ ವಿದ್ಯಾರ್ಥಿಗಳು ತಮಗೆ ತಿಳಿದಿರುವ ಪ್ರಶ್ನೆಗಳನ್ನು ಆರಿಸಿಕೊಂಡು ಉತ್ತರಿಸುವ ಅವಕಾಶ ಕಲ್ಪಿಸಲಾಗುತ್ತದೆ ಎಂದು ತಿಳಿಸಿದೆ.
ಈ ಬಾರಿ ಎಸ್ಸೆಸ್ಸೆಲ್ಸಿ ಬಳಿಕ ದ್ವಿತೀಯ ಪಿಯು ಪರೀಕ್ಷೆಪ್ರತಿ ವರ್ಷ ಸಾಮಾನ್ಯವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಮೊದಲು ನಡೆಸಿ ನಂತರ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುತ್ತಿತ್ತು.
ಮಾರ್ಚ್ ಎರಡನೇ ವಾರದಿಂದ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಮತ್ತು ಮಾರ್ಚ್ ಕೊನೆಯ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗುತ್ತಿತ್ತು. ಆದರೆ, ಕೊರೊನಾ ಸಾಂಕ್ರಾಮಿಕದಿಂದ ಶೈಕ್ಷಣಿಕ ವರ್ಷದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ಪರೀಕ್ಷಾ ವೇಳಾಪಟ್ಟಿ ಕೂಡ ಹಿಂದೆ- ಮುಂದೆಯಾಗಿವೆ. ಈ ಪ್ರಕಾರ ಮಾ.28ರಿಂದ ಏ.11ರ ವರೆಗೆ ಪರೀಕ್ಷೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದಾಗಿ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಈಗಾಗಲೇ ವೇಳಾಪಟ್ಟಿ ಪ್ರಕಟಿಸಿದ್ದು, ಬಳಿಕ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ವೇಳಾಪಟ್ಟಿ
ದಿನಾಂಕ | ವಿಷಯ |
ಏ.16 | ಗಣಿತ, ಶಿಕ್ಷಣ, ಮೂಲ ವಿಜ್ಞಾನ (ಬೇಸಿಕ್ ಮ್ಯಾಥ್ಸ್) |
ಏ.17 | ಭಾನುವಾರ ರಜೆ |
ಏ.18 | ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ |
ಏ.19 | ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್ಸ್, ಹೆಲ್ತ್‌ಕೇರ್, ಬ್ಯೂಟಿ ಮತ್ತು ವೆಲ್‌ನೆಸ್ |
ಏ.20 | ಇತಿಹಾಸ, ಭೌತಶಾಸ್ತ್ರ |
ಏ.21 | ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್ |
ಏ.22 | ತರ್ಕಶಾಸ್ತ್ರ, ಬಿಸಿನೆಸ್ ಸ್ಟಡೀಸ್ |
ಏ.23 | ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ |
ಏ.24 | ಭಾನುವಾರ ರಜೆ |
ಏ.25 | ಅರ್ಥಶಾಸ್ತ್ರ |
ಏ.26 | ಹಿಂದಿ |
ಏ.28 | ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ |
ಏ.29 | ಕನ್ನಡ |
ಏ.30 | ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ |
ಮೇ 1 | ಭಾನುವಾರ ರಜೆ |
ಮೇ 2 | ಭೂಗೋಳಶಾಸ್ತ್ರ, ಜೀವಶಾಸ್ತ್ರ, |
ಮೇ 3 | ರಂಜಾನ್ ರಜೆ |
ಮೇ 4 | ಇಂಗ್ಲಿಷ್ |