ಮೈಸೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ವಿಶೇಷವಾಗಿ ಕೆ ಆರ್ ನಗರ ಶಾಸಕ, ಸಾ.ರಾ.ಮಹೇಶ್ ಪತ್ನಿ ಅನಿತಾ ಅವರು ಬರೋಬ್ಬರಿ 30 ವರ್ಷಗಳ ಬಳಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಮಾಜಿ ಸಚಿವ, ಜೆಡಿಎಸ್ ನಾಯಕ ಸಾ.ರಾ.ಮಹೇಶ್ ಅವರ ಪತ್ನಿ ಅನಿತಾ ಅವರು ಖಾಸಗಿಯಾಗಿ ಪರೀಕ್ಷೆ ಬರೆದು ಕಲಾ ವಿಭಾಗದಲ್ಲಿ 600 ರಲ್ಲಿ 418 ಅಂಕ ಗಳನ್ನು ಪಡೆದು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಅನಿತಾ ಅವರು 1993ರಲ್ಲಿ ಎಸ್ ಎಸ್ಎಲ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದರಾದರೂ ನಂತರ ವಿದ್ಯಾಭ್ಯಾಸ
ಮುಂದುವರಿಸಲು ಸಾಧ್ಯವಾಗಿರಲಿಲ್ಲವಂತೆ.
ಸಾ.ರಾ.ಮಹೇಶ್ ದಂಪತಿಗಳಿಗೆ ಇಬ್ಬರು ಪುತ್ರರಿದ್ದು, ಹಿರಿಯ ಪುತ್ರ ಧನುಷ್ ಎಂಬಿಬಿಎಸ್ ಮುಗಿಸಿ ಬೆಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಯ ಕಾಲೇಜಿನಲ್ಲಿ ಎಂಡಿ ಮಾಡುತ್ತಿದ್ದಾರೆ. ಕಿರಿಯ ಪುತ್ರ ಜಯಂತ್ ಉದ್ಯಮಿಯಾಗಿ ತಂದೆಗೆ ರಾಜಕೀಯ ನೆರವು ನೀಡುತ್ತಿದ್ದಾರೆ.