ವಿಜಯಪುರ : ಆರ್ಥಿಕ ಮುಗ್ಗಟ್ಟಿನಲ್ಲಿರುವ ನನ್ನ ಕುಟುಂಬಕ್ಕೆ ಸಿದ್ದು ಸರ್ಕಾರ ನೀಡುವ ಗ್ಯಾರಂಟಿ ಯೋಜನೆ ಹಾಗೂ ಮೋದಿ ಸರ್ಕಾರ ರೈತರಿಗೆ ನೀಡುವ ಹಣ ನೆರವಿಗೆ ಬಂತು ಎಂದು ರಾಜ್ಯಕ್ಕೆ ಕಲಾ ವಿಭಾಗದಲ್ಲಿ ಪ್ರಥಮ ರ್ಯಾಂಕ್ ಪಡದಿರುವ ವೇದಾಂತ ಸಂತಸ ವ್ಯಕ್ತಪಡಿಸುತ್ತಾರೆ.
ಈ ಕುರಿತು `ಉದಯವಾಣಿ’ ಜೊತೆ ಮಾತನಾಡಿದ ವೇದಾಂತ ನಾವಿ, ತಂದೆಯನ್ನು ಕಳೆದುಕೊಂಡ ಬಳಿಕ ನನ್ನ ಕುಟುಂಬ ಭಾರಿ ಆರ್ಥಿಕ ಸಂಕಷ್ಟದಲ್ಲಿತ್ತು. ಆದರೆ ಪ್ರಧಾನಿ ಮೋದಿ ಅವರ ಸರ್ಕಾರ ಭೂಮಿ ಹೊಂದಿರುವ ರೈತರ ಖಾತೆಗೆ ಜಮೆ ಮಾಡಿದ ಕಿಸಾನ್ ಸಮ್ಮಾನ ಯೋಜನೆಯ ಹಣ ನಮ್ಮ ಕುಟುಂಬದ ಆರ್ಥಿಕ ಶಕ್ತಿಗೆ ನೆರವಾಯಿತು ಎಂದು ಸ್ಮರಿಸುತ್ತಾರೆ.
ಮತ್ತೊಂದೆಡೆ ಕಳೆದ ವರ್ಷದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ನಮ್ಮ ಕುಟುಂಬಕ್ಕೆ ಸಹಕಾರಿ ಆಗಿವೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆಯ ಹಣ ನಮ್ಮ ಕುಟುಂಬಕ್ಕೆ ಸಾಕಷ್ಟು ನೆರವಾಗಿದೆ.
ನಮ್ಮ ತಾಯಿಯ ಬ್ಯಾಂಕ್ ಖಾತೆಗೆ ಜಮೆಯಾದ ಗೃಹಲಕ್ಷ್ಮೀ ಯೋಜನೆ ಹಣ ನನ್ನ ಓದಿಗೆ ಹೆಚ್ಚು ಪ್ರಯೋಜನಕಾರಿ ಆಯ್ತು. ಸರ್ಕಾರದ ಯೋಜನೆಗಳಿಂದ ನಮ್ಮ ಕುಟುಂಬಕ್ಕೆ ಬಂದ ನೆರವಿನ ಹಣ ನನ್ನ ಶೈಕ್ಷಣಿಕ ಸಾಧನೆಯಲ್ಲಿ ಮಹತ್ವದ ಪಾತ್ರ ವಹಿಸಿವೆ ಎಂದು ವೇದಾಂತ ಸಂತೃಪ್ತಿ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದೇನು?