Advertisement

ಪುತ್ತೂರು: ಹೃದಯಾಘಾತದಿಂದ ಪಿಯುಸಿ ವಿದ್ಯಾರ್ಥಿನಿ ನಿಧನ

08:32 AM Mar 23, 2021 | Team Udayavani |

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರೇಯಾ ಪಕ್ಕಳ (16 ವ ) ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Advertisement

ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಕುಂಡಾಪು ಪದ್ಮ ಪಕ್ಕಳ ಹಾಗೂ ಉಮಾವತಿ ದಂಪತಿಯ ಎರಡನೇ ಪುತ್ರಿಯಾಗಿರುವ ಶ್ರೇಯಾ ಪಕ್ಕಳ ವಿವೇಕಾನಂದ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದಳು.

ಇದನ್ನೂ ಓದಿ:ಸೌದಿಯಲ್ಲಿ ಉಳ್ಳಾಲದ ವ್ಯಕ್ತಿ ನಿಗೂಢ ಸಾವು: ತವರೂರಿಗೆ ಮೃತದೇಹ ತರಲು ಸ್ಪಂದಿಸಿದ ಶಾಸಕ

ಆರೋಗ್ಯವಾಗಿದ್ದ ಶ್ರೇಯಾಳಿಗೆ ಇಂದು ಬೆಳಿಗ್ಗೆ ಅನಾರೋಗ್ಯ ಕಾಣಿಸಿಕೊಂಡ ಕಾರಣ ಪುತ್ತೂರಿನ ಆಸ್ಪತ್ರೆಗೆ ಕರೆತರಲಾಯಿತು. ಆದರೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next