ಪುದುಚೇರಿ: ಕೋವಿಡ್ 19 ಎರಡನೇ ಅಲೆ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಜೂನ್ 7ರ ಮಧ್ಯರಾತ್ರಿಯಿಂದ ಜೂನ್ 14ರವರೆಗೆ ಇನ್ನೂ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಲಾಗಿದೆ ಎಂದು ಪುದುಚೇರಿ ಆಡಳಿತ ತಿಳಿಸಿದೆ. ಅಲ್ಲದೇ ಹಲವಾರು ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ ಎಂದು ಘೋಷಿಸಿದೆ.
ಇದನ್ನೂ ಓದಿ:ಹಾನಗಲ್ ಶಾಸಕ ಸಿ.ಎಂ.ಉದಾಸಿ ನಿಧನ: ಗಣ್ಯರ ಸಂತಾಪ
ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾದ ಹಿನ್ನೆಲೆಯಲ್ಲಿ ಕೆಲವೊಂದು ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ.
ಸೋಮವಾರ ತಡರಾತ್ರಿ ಪುದುಚೇರಿಯ ಕಾರ್ಯದರ್ಶಿ ಹೊರಡಿಸಿರುವ ಆದೇಶದಲ್ಲಿ ರಾಜ್ಯದಲ್ಲಿ ಕೋವಿಡ್ ಕರ್ಫ್ಯೂ ಬೆಳಗ್ಗೆ 10ಗಂಟೆಯಿಂದ ಮರುದಿನ ಮುಂಜಾನೆ 5ಗಂಟೆವರೆಗೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿರುವುದಾಗಿ ವರದಿ ವಿವರಿಸಿದೆ.
ಹೊರಡಿಸಿರುವ ಆದೇಶದಲ್ಲಿ ಮದ್ಯದ ಶಾಪ್ ಗಳು ಬೆಳಗ್ಗೆ 9ರಿಂದ ಸಂಜೆ 5ಗಂಟೆವರೆಗೆ ಕೋವಿಡ್ ಮಾರ್ಗಸೂಚಿಯನ್ನು ಅನುಸರಿಸುವ ಮೂಲಕ ವಹಿವಾಟು ನಡೆಸಲು ಅನುಮತಿ ನೀಡಲಾಗಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಮನೆ ಬಾಗಿಲಿಗೂ ಮದ್ಯ ಸರಬರಾಜು ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.