ಎಲ್ಲ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮದ ಯಶಸ್ಸಿಗೆ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಸೂಚಿಸಿದರು.
Advertisement
ಲಸಿಕೆ ಗುರಿ: ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2022ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 106274 ಐದು ವರ್ಷದೊಳಗಿನ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದರು.
26ರವರೆಗೆ ಜಿಲ್ಲೆಯ ನಗರ ಪ್ರದೇಶಗಳಲ್ಲಿ ಮನೆ ಮನೆಗೆ ಭೇಟಿ ನೀಡಿ, ಪಲ್ಸ್ ಪೋಲಿಯೋ ಲಸಿಕೆ ನೀಡಲಾಗುವುದು. ಅಲ್ಲದೇ ರೈಲ್ವೆ, ವಿಮಾನ, ಬಸ್ ನಿಲ್ದಾಣಗಳಲ್ಲಿ ಟೋಲ್ ಪ್ಲಾಜಾಗಳಲ್ಲಿ, ಪೋಲಿಯೋ ಲಸಿಕಾ ಬೂತ್‌ಗಳು ಕಾರ್ಯ ನಿರ್ವಹಿಸಲಿವೆ ಎಂದರು. ತಾಲೂಕುವಾರು ಲಸಿಕೆ ಗುರಿ: ದೇವನಹಳ್ಳಿ ತಾಲೂಕಿ ನಲ್ಲಿ 22424, ಹೊಸಕೋಟೆ ತಾಲೂಕಿನಲ್ಲಿ 29584, ದೊಡ್ಡಬಳ್ಳಾಪುರ ತಾಲೂಕಿನಲ್ಲಿ 30995 ಮತ್ತು ನೆಲಮಂಗಲ ತಾಲೂಕಿನಲ್ಲಿ 23271 ಮಕ್ಕಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 106274 ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಗುರಿ ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.
Related Articles
ಸೂಪರ್ ವೈಸರ್ಸ್ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 153 ಬೂತ್‌ಗಳಿಗೆ 612 ಸಿಬ್ಬಂದಿ 30 ಸೂಪರ್ ವೈಸರ್ಸ್ ಹಾಗೂ ನೆಲಮಂಗಲ ತಾಲೂಕಿನಲ್ಲಿ 92 ಬೂತ್‌ಗಳಿಗೆ 368 ಸಿಬ್ಬಂದಿ 18
ಸೂಪರ್ ವೈಸರ್ಸ್ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 466 ಲಸಿಕಾ ಬೂತ್‌ಗಳಲ್ಲಿ 1864 ಸಿಬ್ಬಂದಿ 93 ಸೂಪವೈಸರ್‌ಗಳು ಹಾಗೂ 91 ಸಂಚಾರಿ ಬೂತ್ ಗಳಲ್ಲಿ 182 ಸಿಬ್ಬಂದಿಗಳು 9 ಸೂಪರ್‌ವೈಸರ್ ಗಳನ್ನು ನಿಯೋಜಿಸಲಾಗುವುದು ಎಂದರು.
Advertisement
ಲಸಿಕೆ ಅರಿವು: ನಗರ ಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿ, ಕೊಳಚೆ ಮತ್ತು ಇತರೆ ಎಚ್‌ಆರ್‌ಎ ಪ್ರದೇಶಗಳಲ್ಲಿ ಲಸಿಕೆ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.
ವಿವಿಧ ಇಲಾಖೆ ಸಹಕಾ ಅಗತ್ಯ: ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಯಾಗಲು ಸಾರ್ವಜನಿಕ ಶಿಕ್ಷಣ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಸ್ಕಾಂ, ಪ್ರಾದೇಶಿಕ ಸಾರಿಗೆ ಇಲಾಖೆಗಳ ಪಾತ್ರ ಮಹತ್ವವಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಕಾರ್ಯ ನಿರ್ವಹಿಸಬೇಕೆಂದು ನಿರ್ದೇಶಿಸಿದರು. ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀನಿವಾಸ್, ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕಿ ಸುಮ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಬಂಧಿಸಿದ ತಾಲೂಕು ವೈದ್ಯಾಧಿಕಾರಿಗಳು ಹಾಗೂ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳು, ತಹಶೀಲ್ದಾರ್‌ಗಳು ಇದ್ದರು.