Advertisement

Pulse Polio ರಾಜ್ಯಾದ್ಯಂತ ಮಾ.3ರಿಂದ 6ರ ವರೆಗೆ ಪಲ್ಸ್‌ ಪೋಲಿಯೋ

12:00 AM Feb 27, 2024 | Team Udayavani |

ಬೆಂಗಳೂರು: ರಾಜ್ಯಾದ್ಯಂತ ಮಾರ್ಚ್‌ 3ರಿಂದ 6ರ ವರೆಗೆ ನಡೆಯಲಿರುವ ಪಲ್ಸ್‌ ಪೋಲಿಯೋ ಕಾರ್ಯಕ್ರಮಕ್ಕೆ ಸಿದ್ಧತೆ ಆರಂಭಗೊಂಡಿದೆ.

Advertisement

ಕಳೆದ ಬಾರಿ ಪಲ್ಸ್‌ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ಕಡಿಮೆ ಪ್ರಗತಿ ಹೊಂದಿರುವ ಪ್ರದೇಶಗಳ ಮೇಲೆ ಹೆಚ್ಚಿನ ನಿಗಾ ವಹಿಸಲು ನಿರ್ಧರಿಸಲಾಗಿದೆ ಎಂದು ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಡಾ|ಶಾಲಿನಿ ರಜನೀಶ್‌ ತಿಳಿಸಿದರು.

ಲಸಿಕಾ ಕಾರ್ಯಕ್ರಮ ಅನುಷ್ಠಾನ ಕುರಿತು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ರಾಜ್ಯಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯ ಮಟ್ಟದಲ್ಲಿ ಮುಖ್ಯಮಂತ್ರಿಯವರು ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಅದೇ ರೀತಿ, ಜಿಲ್ಲೆಗಳಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರು 5 ವರ್ಷದ ಒಳಗಿನ ಮಕ್ಕಳಿಗೆ ಲಸಿಕೆ ನೀಡುವ ಮೂಲಕ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next