Advertisement

ಕಾರ್ಯಕ್ರಮದ ಸಂಪೂರ್ಣ ಯಶಸ್ಸಿಗೆ ಸಹಕರಿಸಿ: ಜಿಲ್ಲಾಧಿಕಾರಿ

06:38 AM Jan 11, 2019 | Team Udayavani |

ಮಡಿಕೇರಿ : ಇದೇ ಫೆ. 3ರಂದು ಪಲ್ಸ್‌ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯಲ್ಲಿ ಪಲ್ಸ್‌ ಪೋಲಿಯೋ ಕಾರ್ಯಕ್ರಮ ಶೇಕಡವಾರು ಯಶಸ್ಸಿಗೆ ಎಲ್ಲ ಇಲಾಖೆ ಅಧಿಕಾರಿಗಳು, ಸಿಬಂದಿ, ಸಂಘ ಸಂಸ್ಥೆಗಳು ಕೈಜೋಡಿಸುವಂತೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಕೋರಿದ್ದಾರೆ.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಲ್ಸ್‌ ಪೋಲಿಯೊ ಕಾರ್ಯಕ್ರಮ ಸಿದ್ಧತೆ ಕೈಗೊಳ್ಳುವ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪಲ್ಸ್‌ ಪೋಲಿಯೊವನ್ನು ಕಡ್ಡಾಯವಾಗಿ ಹಾಕಬೇಕು, ಕೊಡಗು ಜಿಲ್ಲೆಯಿಂದ ಹೊರ ಹೋಗುವ ಹಾಗೂ ಬರುವ ವಲಸೆ ಮಕ್ಕಳು, ಜತೆಗೆ ಕಳೆದ ಬಾರಿ ಪಲ್ಸ್‌ ಪೋಲಿಯೊದಿಂದ ಹೊರಗುಳಿದ ಮಕ್ಕಳನ್ನು ಗುರ್ತಿಸಿ ಪಲ್ಸ್‌ ಪೋಲಿಯೋ ಹನಿ ಹಾಕಬೇಕು. ಹಾಗೆಯೇ ಜಿಲ್ಲೆಯ ಜನ ದಟ್ಟಣೆ ಇರುವ ಪ್ರದೇಶಗಳಲ್ಲಿ ತಂಡ ರಚಿಸಿ ಪಲ್ಸ್‌ ಪೋಲಿಯೊ ಹನಿ ಹಾಕುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

ಜಿಲ್ಲೆಯಲ್ಲಿ ಅಲ್ಲಲ್ಲಿ ಮನೆಗಳು ಇರುವುದರಿಂದ ಮತ್ತು ಕುಗ್ರಾಮಗಳಿಗೆ ಪಲ್ಸ್‌ ಪೋಲಿಯೋ ಪೂರೈಕೆ ಮಾಡಲು ಅಗತ್ಯ ವಾಹನಗಳನ್ನು ಒದಗಿಸಬೇಕು. ಜತೆಗೆ ಪೋಲಿಯೊ ಲಸಿಕೆ ಹಾಳಾಗ ದಂತೆ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ನಿರಂತರವಾಗಿ ವಿದ್ಯುತ್‌ ಪೂರೈಕೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರು ಸ್ಪಷ್ಟ ಸೂಚನೆ ನೀಡಿದರು.

ಪಲ್ಸ್‌ ಪೋಲಿಯೊ ಕಾರ್ಯಕ್ರಮ ಜಿಲ್ಲೆಯಲ್ಲಿ ಯಶಸ್ವಿಯಾಗಲು ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಪಾತ್ರ ಮಹತ್ತರವಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಸಮನ್ವಯತೆ ಸಾಧಿಸಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿ ಕಾರಿ ಅವರು ನಿರ್ದೇಶನ ನೀಡಿದರು.

Advertisement

ಜಿಲ್ಲೆಯ ವಿವಿಧ ಹಾಡಿಗಳು, ವಲ್ನರಬಲ್‌ ಪ್ರದೇಶ, ಲೈನ್‌ಮನೆಗಳು ಹಾಗೂ ಜನದಟ್ಟಣೆ ಪ್ರದೇಶಗಳಿಗೆ ತೆರಳಿ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೊ ಹನಿ ಹಾಕಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.

39,319 ಮಕ್ಕಳು
ಜಿಲ್ಲೆಯಲ್ಲಿ ಒಟ್ಟು 5,66,397 ಜನಸಂಖ್ಯೆ ಇದ್ದು, ಇವರಲ್ಲಿ 57,424 ನಗರ/ಪಟ್ಟಣ ಪ್ರದೇಶದಲ್ಲಿ ಮತ್ತು 5,08,973 ಗ್ರಾಮೀಣ ಪ್ರದೇಶದಲ್ಲಿ ಜನಸಂಖ್ಯೆ ಇದೆೆ. ಇವರಲ್ಲಿ 5 ವರ್ಷದೊಳಗಿನ 39,319 ಮಕ್ಕಳು ಜಿಲ್ಲೆಯಲ್ಲಿದ್ದು, ಇವರಲ್ಲಿ 4,602 ನಗರ ಮತ್ತು 34,717 ಗ್ರಾಮೀಣ ಪ್ರದೇಶದ ಮಕ್ಕಳಿದ್ದಾರೆ. ಹಾಗೆಯೇ ಜಿಲ್ಲೆಯಲ್ಲಿ 1,99,212 ವಲಸಿಗ ಜನಸಂಖ್ಯೆ ಇದ್ದು, ಇವರಲ್ಲಿ 39,319 ಐದು ವರ್ಷದೊಳಗಿನ ಮಕ್ಕಳು ಇದ್ದಾರೆ, ಒಟ್ಟಾರೆ ಜಿಲ್ಲೆಯಲ್ಲಿ 1,33,356 ಕುಟುಂಬಗಳಿವೆ ಎಂದು ಅವರು ಮಾಹಿತಿ ನೀಡಿದರು. 
-ಡಾ| ರಾಜೇಶ್‌
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next