Advertisement

ಉಡುಪಿ ಜಿಲ್ಲೆಯಲ್ಲಿ 77,722 ಮಕ್ಕಳಿಗೆ ಪೋಲಿಯೋ ಹನಿ: ಜಿಲ್ಲಾಧಿಕಾರಿ

12:30 AM Jan 18, 2019 | Team Udayavani |

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಫೆ. 3ರಂದು ನಡೆಯುವ ಪಲ್ಸ್‌ ಪೋಲಿಯೋ ಕಾರ್ಯಕ್ರಮದಲ್ಲಿ 77,722 ಮಕ್ಕಳಿಗೆ ಪೋಲಿಯೋ ಹನಿ ನೀಡುವ ಗುರಿ ಇದ್ದು, 677 ಬೂತ್‌ಗಳನ್ನು ತೆರೆಯಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ತಿಳಿಸಿದ್ದಾರೆ.

Advertisement

ಸೋಮವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪಲ್ಸ್‌ ಪೋಲಿಯೋ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಬಾರಿ ಫೆ. 3ರಂದು ಒಂದೇ ಹಂತದಲ್ಲಿ ಪಲ್ಸ್‌ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮ ನಡೆಯಲಿದೆ ಎಂದರು.

ಯಾವುದೇ ಮಗು ಪೊಲಿಯೋ ಲಸಿಕೆಯಿಂದ ವಂಚಿತವಾಗದಂತೆ ಕಾರ್ಯ ನಿರ್ವಹಿಸುವಂತೆ ಹಾಗೂ ವಲಸೆ ಕಾರ್ಮಿಕರು ವಾಸಿಸುವ ಪ್ರದೇಶದಲ್ಲಿ ಹೆಚ್ಚಿನ ಗಮನ ಹರಿಸಿ, ಅಲ್ಲಿನ ಮಕ್ಕಳಿಗೆ ಲಸಿಕೆ ನೀಡಬೇಕಾಗಿದೆ. ಎಲ್ಲ ಇಲಾಖೆಗಳು, ಸ್ವಯಂ ಸೇವಾ ಸಂಘಟನೆಗಳು ಕಾರ್ಯಕ್ರಮಕ್ಕೆ ಸೂಕ್ತ ಸಹಕಾರ ನೀಡಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಡಿಎಚ್‌ಒ ಡಾ| ರೋಹಿಣಿ, ವಿಶ್ವ ಆರೋಗ್ಯ ಸಂಸ್ಥೆ ಪ್ರತಿನಿಧಿ ಸತೀಶ್ಚಂದ್ರ, ವಿವಿಧ ಸ್ವಯಂ ಸೇವಾ ಸಂಘಟನೆಗಳ ಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next