ಪುಣೆ, ಜ. 27: ಪುಣೆ ಬಂಟರ ಸಂಘದ ವಾರ್ಷಿಕೋತ್ಸವ ಸಮಾರಂಭವು ಜ. 26 ರಂದು ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಕೇಂದ್ರದ ಲತಾ ಸುಧೀರ್ ಶೆಟ್ಟಿ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.
ಸಂಘದ ಅಧ್ಯಕ್ಷ ಇನ್ನ ಕುರ್ಕಿಲ್ ಬೆಟ್ಟು ಸಂತೋಷ್ ವಿ. ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿಟ್ಟೆ ವಿಶ್ವವಿದ್ಯಾಲಯದ ಉಪಕುಲಪತಿಗಳು ಹಾಗೂ ವರ್ಲ್ಡ್ ಬಂಟ್ಸ್ ಫೌಂಡೇಶನ್ ಇದರಕಾರ್ಯಾಧ್ಯಕ್ಷರಾದ ಡಾ| ಎಂ. ಶಾಂತಾರಾಮ್ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ವಿಶ್ವಸ್ಥರು ಹಾಗೂ ಮಾಜಿ ಅಧ್ಯಕ್ಷ ನವೀನ್‌ಚಂದ್ರ ಶೆಟ್ಟಿ, ಮುಂಬಯಿಯ ಹೊಟೇಲ್ ಉದ್ಯಮಿ ಕೃಷ್ಣ ಶೆಟ್ಟಿ ಹಾಗೂ ಮುಂಬಯಿ ಬಂಟರ ಸಂಘದ ಮಹಿಳಾ ವಿಭಾಗದ ಉಪ ಕಾರ್ಯಧ್ಯಕ್ಷೆ ಉಮಾಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.
ಪ್ರತೀ ವರ್ಷ ಸಮಾಜದ ಶ್ರೇಷ್ಠ ಸಾಧಕನನ್ನು ಗುರುತಿಸಿ ಕೊಡಮಾಡುವ ದಿ| ಗುಂಡೂರಾಜ್‌ಎಂ. ಶೆಟ್ಟಿ ಅತ್ಯುತ್ತಮ ಸಮಾಜ ಸೇವಕಪ್ರಶಸ್ತಿಯನ್ನು ಉಡುಪಿಯ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿಯವರಿಗೆ ಪ್ರದಾನಿಸಲಾಯಿತು. ಆರ್ಕಿಟೆಕ್ಚರ್ ಪ್ರಕಾಶ್‌ಕುಲಕರ್ಣಿ ದಂಪತಿಯನ್ನು ಸಮ್ಮಾನಿಸಲಾ ಯಿತು. ಅತಿಥಿಗಳು ದೀಪ ಪ್ರಜ್ವಲಿಸಿ ತೆಂಗಿನ ಹಿಂಗಾರವನ್ನು ಅರಳಿಸಿ ಸಮಾರಂಭಕ್ಕೆ ಚಾಲನೆಯಿತ್ತರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾದ ಶ್ರೀಮತಿ ಶಾಂತಾರಾಮ್ ಶೆಟ್ಟಿ, ಸಂಘದ ಉಪಾಧ್ಯಕ್ಷರಾದ ಸತೀಶ್ ಆರ್. ಶೆಟ್ಟಿ ಮತ್ತು ಮೋಹನ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕೆ. ಅಜಿತ್ ಹೆಗ್ಡೆ, ಗೌರವ ಕೋಶಾಧಿಕಾರಿ ಎರ್ಮಾಳ್ ಚಂದ್ರಹಾಸ ಶೆಟ್ಟಿ, ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಪುತ್ತೂರು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಎಸ್. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಯಶ್‌ರಾಜ್ ಶೆಟ್ಟಿ, ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಗಣೇಶ್ ಜೆ. ಪೂಂಜಾ, ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ರವಿ ಕೆ. ಶೆಟ್ಟಿ ಉಪಸ್ಥಿತರಿದ್ದರು.
ಯಶೋದಾ ಶೆಟ್ಟಿ ಮತ್ತು ಬಳಗ ಪ್ರಾರ್ಥಿಸಿದರು. ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಪುತ್ತೂರುಸ್ವಾಗತಿಸಿದರು. ಅತಿಥಿಗಳನ್ನು ಎಲೆ-ಅಡಿಕೆ, ಹಿಂಗಾರ ನೀಡಿ ಸ್ವಾಗತಿಸಲಾಯಿತು. ನಿತೇಶ್ ಶೆಟ್ಟಿ ಎಕ್ಕಾರ್ ಹಾಗೂ ಕಾಂತಿ ಸೀತಾರಾಮ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.ಅತಿಥಿಗಳನ್ನು ಸಾರಿಕಾ ಚಂದ್ರಹಾಸ್ ಶೆಟ್ಟಿ, ಶೇಖರ್ ಸಿ. ಶೆಟ್ಟಿ ಹಾಗೂ ಹರ್ಷಿತಾ ಹರೀಶ್ ಶೆಟ್ಟಿ, ಸಂಧ್ಯಾ ಆರ್. ಶೆಟ್ಟಿ ಪರಿಚಯಿಸಿದರು. ಆದ್ಯಾ ಸುಧಾಕರ್ ಶೆಟ್ಟಿ ಸಮ್ಮಾನ ಪತ್ರ ವಾಚಿಸಿದರು. ಅತಿಥಿ-ಗಣ್ಯರನ್ನು ಪೇಟ ತೊಡಿಸಿ, ಶಾಲು, ಸ್ಮರಣಿಕೆ ಫಲಪುಷ್ಪವನ್ನಿತ್ತು ಸಮ್ಮಾನಿಸಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸದಸ್ಯರುಗಳ ಮಕ್ಕಳಿಂದ ನೃತ್ಯ ವೈವಿಧ್ಯಗಳು, ಭ್ರಾಮರಿ ಯಕ್ಷನೃತ್ಯ ಕಲಾ ನಿಲಯ ಚಾರಿಟೇಬಲ್ ಟ್ರಸ್ಟ್ ಮುಂಬಯಿ ಇದರ ಬಾಲ ಕಲಾವಿದರು ಅಭಿನಯಿಸುವ ಖ್ಯಾತ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಭಾಗವತಿಕೆಯಲ್ಲಿ ಸುದರ್ಶನ ವಿಜಯ ಯಕ್ಷಗಾನ ಪ್ರದರ್ಶನಗೊಂಡಿತು. ಸಂಘದ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗ,ಉತ್ತರ ಹಾಗೂ ದಕ್ಷಿಣ ಪ್ರಾದೇಶಿಕ ಸಮಿತಿ ಪದಾಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಸಂಘದ ಮಾಜಿ ಅಧ್ಯಕ್ಷರುಗಳಾದ ಕುಶಲ್ ಹೆಗ್ಡೆ, ಜಯಂತ್ ಶೆಟ್ಟಿ, ಮೊಳಹಳ್ಳಿ ಬಾಲಕೃಷ್ಣ ಹೆಗ್ಡೆ, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸಮಾಜ ಬಾಂಧವರು ಉಪಸ್ಥಿತರಿದ್ದರು.
-ಚಿತ್ರ – ವರದಿ : ಕಿರಣ್ ಬಿ. ರೈ ಕರ್ನೂರು