Advertisement

ಪುಣೆ ಬಂಟ್ಸ್‌ ಅಸೋಸಿಯೇಶನ್‌: 8ನೇ ವಾರ್ಷಿಕೋತ್ಸವಕ್ಕೆ ಚಾಲನೆ

10:46 AM Jan 15, 2019 | |

ಪುಣೆ: ಬಂಟ್ಸ್‌ ಅಸೋಸಿಯೇಶನ್‌ ಪುಣೆ ಇದರ 8ನೇ ವಾರ್ಷಿಕೋತ್ಸವ ಸಮಾರಂಭಜ. 12 ರಂದು  ನಗರದ ತಿಲಕ್‌ರೋಡ್‌ ಸಮೀಪದ  ಸ್ಮಾರಕ್‌ ಮಂದಿರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

Advertisement

ಸಂಘದ ಅಧ್ಯಕ್ಷ ಆನಂದ್‌  ಶೆಟ್ಟಿ ಮಿಯ್ನಾರ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯ ಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪದ್ಮನಾಭ ಎಸ್‌. ಪಯ್ಯಡೆ ಅವರು ದೀಪ ಪ್ರಜ್ವಲಿಸಿ ಚಾಲನೆ ನೀಡಿದರು.

ಗೌರವ ಅತಿಥಿಗಳಾಗಿ ಮಂಗಳೂರು ನಗರ  ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ| ವೈ. ಭರತ್‌ ಶೆಟ್ಟಿ, ಸಂಘದ ನಿಕಟಪೂರ್ವ ಅಧ್ಯಕ್ಷರಾದ ನಾರಾಯಣ ಕೆ. ಶೆಟ್ಟಿ, ಉಪಾಧ್ಯಕ್ಷರಾದ ಗಣೇಶ್‌ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಅರವಿಂದ ರೈ, ಗೌರವ ಕೋಶಾಧಿಕಾರಿ ದಿನೇಶ್‌ ಶೆಟ್ಟಿ ನಿಟ್ಟೆ, ಸಾಂ ಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಸುಶ್ಮಿತ್‌ ಎಸ್‌. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ದೀಪಾ ಅರವಿಂದ ರೈ, ಕಾರ್ಯದರ್ಶಿ ಉಷಾ ಯು. ಶೆಟ್ಟಿ, ನಿಕಟಪೂರ್ವ  ಕಾರ್ಯಾಧ್ಯಕ್ಷೆ ಮಲ್ಲಿಕಾ ಎ. ಶೆಟ್ಟಿ , ಯುವ ವಿಭಾಗದ ಕಾರ್ಯಾಧ್ಯಕ್ಷೆ ನಮ್ರತಾ ಜೆ. ಶೆಟ್ಟಿ  ಮತ್ತಿತರರು ಉಪಸ್ಥಿತರಿದ್ದರು.
ವರ್ಷದ ವಿಶೇಷ ಸಾಧಕರಾಗಿ ಪುಣೆ ಬಂಟರ ಸಂಘದ ಅಧ್ಯಕ್ಷರಾದ ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲ್‌ ಬೆಟ್ಟು ಬಾಳಿಕೆ  ದಂಪತಿಯನ್ನು  ಶಾಲು ಹೊದೆಸಿ, ಫಲಪುಷ್ಪ, ನೆನಪಿನ ಕಾಣಿಕೆ, ಸಮ್ಮಾನಪತ್ರವನ್ನಿತ್ತು ಸಮ್ಮಾನಿಸಲಾಯಿತು. ಅತಿಥಿ-ಗಣ್ಯರನ್ನು ಸಂಘದ ವತಿಯಿಂದ ಸ್ಮರಣಿಕೆ ನೆನಪಿನ ಕಾಣಿಕೆಗಳನ್ನು ಸತ್ಕರಿಸಲಾಯಿತು. ಸಂಘದ ಕಾರ್ಯಕಾರಿ ಸಮಿತಿಯಲ್ಲಿದ್ದುಕೊಂಡು ಗಮನಾರ್ಹ ಸಾಧನೆಯನ್ನು ಪರಿಗಣಿಸಿ ಸತೀಶ್‌ ಶೆಟ್ಟಿ ಎರವಾಡ ಇವರನ್ನು ಸಂಘದ ವತಿಯಿಂದ ಸಮ್ಮಾನಿಸಲಾಯಿತು. ನಿಕಟಪೂರ್ವ ಅಧ್ಯಕ್ಷರಾದ ನಾರಾಯಣ ಕೆ. ಶೆಟ್ಟಿ ಸ್ವಾಗತಿಸಿದರು.

ಲತಾ ಎಸ್‌. ಶೆಟ್ಟಿ, ಪ್ರಫುÇÉಾ ವಿ. ಶೆಟ್ಟಿ, ಶಾಲಿನಿ ಎಂ. ಶೆಟ್ಟಿ ಪ್ರಾರ್ಥನೆಗೈದರು. ಸಂಘದ  ಪ್ರಧಾನ ಕಾರ್ಯದರ್ಶಿ ಅರವಿಂದ ರೈ ಸಂಘದ ವಾರ್ಷಿಕ ಕಾರ್ಯಚಟುವಟಿಕೆಗಳ ವರದಿಯನ್ನು ವಾಚಿಸಿದರು. ಮಹಿಳಾ ವಿಭಾಗದ ಕಾರ್ಯಚಟುವಟಿಕೆಗಳ ವರದಿಯನ್ನು ಮಹಿಳಾ ವಿಭಾಗದ ಕಾರ್ಯದರ್ಶಿ ಉಷಾ ಯು. ಶೆಟ್ಟಿ ಅವರು ವಾಚಿಸಿದರು.  ಸಂಘದ ವಾರ್ಷಿಕ ಕ್ರೀಡೋತ್ಸವದಲ್ಲಿ ವಿಜೇತ  ಕ್ರೀಡಾಳುಗಳಿಗೆ ಅತಿಥಿ ಗಣ್ಯರು ಬಹುಮಾನಗಳನ್ನು ವಿತರಿಸಿ ಶುಭಹಾರೈಸಿದರು.
ಕೆಮೂ¤ರು ಸುಧಾಕರ ಶೆಟ್ಟಿ ಹಾಗೂ ಸುಶ್ಮಿತ್‌ ಎಸ್‌. ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ರೋಹಿತ್‌ ಶೆಟ್ಟಿ ನಗ್ರಿಗುತ್ತು ಸಮ್ಮಾನಪತ್ರ ವಾಚಿಸಿದರು. ಲೋಹಿತ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಗೌರವ ಕೋಶಾಧಿಕಾರಿ ವಂದಿಸಿದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಪುಣೆಯ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರುಗಳನ್ನು ಪುಷ್ಪಗುತ್ಛ ನೀಡಿ ಗೌರವಿಸಲಾಯಿತು.

ಸಂಘದ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು, ಮಹಿಳಾ ವಿಭಾಗ ಹಾಗೂ ಯುವ ವಿಭಾಗದ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸದಸ್ಯರಿಂದ ವಿವಿಧ ನೃತ್ಯ ಪ್ರದರ್ಶನಗಳು ಹಾಗೂ ವಿವಿಧ ಮನೋರಂಜನಾ ಕಾರ್ಯಕ್ರಮಗಳು ನಡೆಯಿತು. 

Advertisement

ಚಿತ್ರ-ವರದಿ : ಕಿರಣ್‌ ಬಿ. ರೈ ಕರ್ನೂರು

Advertisement

Udayavani is now on Telegram. Click here to join our channel and stay updated with the latest news.

Next