ಪುಣೆ: ಪುಣೆ ಬಂಟರ ಸಂಘದ ವಾರ್ಷಿಕೋತ್ಸವ ಸಮಾರಂಭವು ಜ. 26ರಂದು ಸಂಘದ ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಕೇಂದ್ರ ಬಂಟರ ಭವನ ಇಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭ ಅತಿಥಿ-ಗಣ್ಯರನ್ನು, ವಿವಿಧ ಸಾಧಕರನ್ನು ಸಂಘದ ವತಿಯಿಂದ ಸಮ್ಮಾನಿಸಲಾಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಭಂಡಾರಿ ಫೌಂಡೇಶನ್‌ನ ಸ್ಥಾಪಕ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ, ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ನಿವೃತ್ತ ಸೈನಿಕ ಶ್ಯಾಮರಾಜ್ ಇವಿ ಹಾಗೂ ಪುಣೆ ರೆಸ್ಟೋರೆಂಟ್ ಹೊಟೇಲಿಯರ್ಸ್ ಅಸೋಸಿಯೇಶನ್ ಅಧ್ಯಕ್ಷ ಗಣೇಶ್ ಶೆಟ್ಟಿ ದಂಪತಿಗಳನ್ನು ಶಾಲು, ಸ್ಮರಣಿಕೆ, ಪುಷ್ಪಗುತ್ಛ ನೀಡಿ ಸಮ್ಮಾನಿಸಲಾಯಿತು.
ಈ ಸಂದರ್ಭ ವೇದಿಕೆಯಲ್ಲಿ ಸಂಘದ ವಾರ್ಷಿಕ ಅತ್ಯುತ್ತಮ ಸಮಾಜ ಸೇವಕ ಸಮ್ಮಾನ ಸ್ವೀಕರಿಸಿದ ಎಂಆರ್‌ಜಿ ಗ್ರೂಪ್ ಬೆಂಗಳೂರು ಇದರ ಕಾರ್ಯಾಧ್ಯಕ್ಷರಾದ ಕೆ. ಪ್ರಕಾಶ್ ಶೆಟ್ಟಿ, ಸಂಘದ ಮಾಜಿ ಅಧ್ಯಕ್ಷರಾದ ಕುಶಲ್ ಹೆಗ್ಡೆ, ಸದಾನಂದ ಕೆ. ಶೆಟ್ಟಿ, ಜಯಂತ್ ಶೆಟ್ಟಿ, ಮೊಳಹಳ್ಳಿ ಬಾಲಕೃಷ್ಣ ಹೆಗ್ಡೆ, ಪ್ರಕಾಶ್ ಶೆಟ್ಟಿಯವರ ಪತ್ನಿ ಆಶಾ ಪ್ರಕಾಶ್ ಶೆಟ್ಟಿ, ಸಂಘದ ಗೌರವಾಧ್ಯಕ್ಷ ಜಗನ್ನಾಥ ಬಿ. ಶೆಟ್ಟಿ, ಅಧ್ಯಕ್ಷ ಸಂತೋಷ್ ವಿ. ಶೆಟ್ಟಿ, ಉಪಾಧ್ಯಕ್ಷರಾದ ಸತೀಶ್ ಆರ್. ಶೆಟ್ಟಿ ಮತ್ತು ಮೋಹನ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕೆ. ಅಜಿತ್ ಹೆಗ್ಡೆ, ಗೌರವ ಕೋಶಾಧಿಕಾರಿ ಎರ್ಮಾಳ್ ಚಂದ್ರಹಾಸ ಶೆಟ್ಟಿ, ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಪುತ್ತೂರು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಎಸ್. ಶೆಟ್ಟಿ, ಸಂಘದ ಕಟ್ಟಡ ಸಮಿತಿ ಕಾರ್ಯಾಧ್ಯಕ್ಷ ರಾಮಕೃಷ್ಣ ಶೆಟ್ಟಿ, ಶಿಕ್ಷಣ ಮತ್ತು ಸಾಮಾಜಿಕ ಸಮಿತಿ ಕಾರ್ಯಾಧ್ಯಕ್ಷ ಚಂದ್ರಶೇಖರ ಶೆಟ್ಟಿ ನಿಟ್ಟೆ, ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷ ದಿನೇಶ್ ಶೆಟ್ಟಿ ಕಳತ್ತೂರು, ಪದಾಧಿಕಾರಿಗಳಾದ ಮಾಧವ ಆರ್. ಶೆಟ್ಟಿ, ವಿವೇಕಾನಂದ ಶೆಟ್ಟಿ ಆವರ್ಸೆ, ಗಣೇಶ್ ಶೆಟ್ಟಿ, ಪ್ರಶಾಂತ್ ಶೆಟ್ಟಿ ಹೆರ್ಡೆಬೀಡು, ಗಣೇಶ್ ಹೆಗ್ಡೆ, ವಿಶ್ವನಾಥ ಎಸ್. ಶೆಟ್ಟಿ, ಶಶೀಂದ್ರ ಶೆಟ್ಟಿ, ಪ್ರಶಾಂತ್ ಎ. ಶೆಟ್ಟಿ, ತಾರಾನಾಥ ರೈ ಮೇಗಿನಗುತ್ತು, ವಸಂತ್ ಶೆಟ್ಟಿ ಬೈಲೂರು, ಯುವ ವಿಭಾಗದ ಕಾರ್ಯಾಧ್ಯಕ್ಷ ಯಶ್‌ರಾಜ್ ಶೆಟ್ಟಿ, ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ಗಣೇಶ್ ಜೆ. ಪೂಂಜಾ, ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ರವಿ ಕೆ. ಶೆಟ್ಟಿ, ಉತ್ತರ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರಮೀಳಾ ಎಸ್. ಶೆಟ್ಟಿ, ದಕ್ಷಿಣ ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಅಂಬಿಕಾ ವಿ. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಚಿತ್ರ-ವರದಿ : ಕಿರಣ್ ಬಿ. ರೈ ಕರ್ನೂರು