Advertisement

ಪುಣೆ ಬಂಟರ ಭವನ: ಉದ್ಘಾಟನ ಸಮಿತಿಯ ಕೃತಜ್ಞತಾ ಸಭೆ

03:09 PM Apr 24, 2018 | Team Udayavani |

ಪುಣೆ: ಪುಣೆ ಬಂಟರ ಸಂಘದ ವತಿಯಿಂದ ಓಣಿಮಜಲು ಜಗನ್ನಾಥ ಶೆಟ್ಟಿ ಬಂಟರ ಭವನದಲ್ಲಿ ಭವನದ ಉದ್ಘಾಟನಾ ಸಮಾರಂಭವನ್ನು ಯಶಸ್ವಿಗೊಳಿಸಲು ಶ್ರಮಿಸಿದ ಸಮಿತಿ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಲು  ಔತಣಕೂಟವು ಎ. 16 ರಂದು ಆಯೋಜಿಸಲಾಗಿತ್ತು.

Advertisement

ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿಯವರ ನೇತೃತ್ವದಲ್ಲಿ   ನಡೆದ ಕಾರ್ಯಕ್ರಮದಲ್ಲಿ  ಭವನದ ಉದ್ಘಾಟನಾ ಸಮಾರಂಭವನ್ನು ಯಶಸ್ವಿಯಾಗಿ ನಡೆಸುವಲ್ಲಿ ಸಹಕಾರ ನೀಡಿದ ಉದ್ಘಾಟನಾ ಸಮಿತಿಗಳ ಸರ್ವ ಸದಸ್ಯರಿಗೆ, ಸಂಘದ ಪದಾಧಿಕಾರಿಗಳಿಗೆ, ಮಹಿಳಾ ವಿಭಾಗ, ಯುವ ವಿಭಾಗ, ಉತ್ತರ ಮತ್ತು ದಕ್ಷಿಣ ಪ್ರಾದೇಶಿಕ ಸಮಿತಿಗಳಿಗೆ, ಪಿಂಪ್ರಿ-ಚಿಂಚಾÌಡ್‌ ಬಂಟರ ಸಂಘದ ಪದಾಧಿಕಾರಿಗಳಿಗೆ ಹಾಗೂ ಬಂಟ್ಸ್‌ ಅಸೋಸಿಯೇಶನ್‌  ಇದರ ಪದಾಧಿಕಾರಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು.

ಸಂಘದ ಗೌರವಾಧ್ಯಕ್ಷ ಜಗನ್ನಾಥ ಬಿ. ಶೆಟ್ಟಿ ಓಣಿಮಜಲು ಮಾತನಾಡಿ ಸಂತೋಷ್‌ ಶೆಟ್ಟಿಯವರ ನೇತೃತ್ವದಲ್ಲಿ ನಮ್ಮದೇ ಆದ ಭವನ ವೊಂದು ನಿರ್ಮಾಣಗೊಂಡು ಉದ್ಘಾಟನಾ ಸಮಾರಂಭವನ್ನು ಬಹಳ ಶಿಸ್ತುಬದ್ಧವಾಗಿ ನಡೆಸಿರುವುದು ಶ್ಲಾಘನೆಗೆ ಪಾತ್ರವಾಗಿದೆ. ಭವಿಷ್ಯದಲ್ಲಿ ಸಮಾಜ ಬಾಂಧವರಿಗಾಗಿ ಸಂಘದ ವತಿಯಿಂದ ಶಾಲೆ, ಆಸ್ಪತ್ರೆ ನಿರ್ಮಾಣದಂತಹ ಕಾರ್ಯ ನಡೆಯಲಿ. ನನ್ನ ಆಶೀರ್ವಾದ ಸದಾ ನಿಮ್ಮೊಂದಿಗಿದೆ ಎಂದರು.

ಸಂಘದ ಮಾಜಿ ಅಧ್ಯಕ್ಷರೂ ಪುಣೆ ಕನ್ನಡ ಸಂಘದ ಉಪಾಧ್ಯಕ್ಷರಾದ ಕುಶಲ್‌ ಹೆಗ್ಡೆ ಮಾತನಾಡಿ ಸಂತೋಷ್‌ ಶೆಟ್ಟಿಯ ಕಾರ್ಯಕ್ಷಮತೆಯನ್ನು ಕೊಂಡಾಡಿದರಲ್ಲದೆ ಅಸಾಮಾನ್ಯವಾದುದನ್ನು ಸಾಧಿಸಿ ತೋರಿಸಿದ ಅವರ ಕಾರ್ಯ ಅಭಿನಂದನೀಯವಾಗಿದೆ. ಅವರಿಂದ  ಬಹಳಷ್ಟು ಸಂಗತಿಗಳನ್ನು ನಾವು ಕಲಿಯುವಂತಾಗಿದೆ. ಸಂಘದ ಮೂಲಕ ಭವಿಷ್ಯದಲ್ಲಿ ಇನ್ನಷ್ಟು ಸಮಾಜಪರ ಕಾರ್ಯಗಳು ನಡೆಯಲಿ ಎಂದರು.

ಮುಂಬಯಿಯ ಕಲಾಸಂಘಟಕ ಕರ್ನೂರು ಮೋಹನ್‌ ರೈ ಹಾಗೂ ಮುಂಬಯಿ ಬಂಟರ ವಾಣಿಯ ಗೌರವ ಸಂಪಾದಕರಾದ ಅಶೋಕ್‌ ಪಕ್ಕಳ  ಸಂತೋಷ್‌ ಶೆಟ್ಟಿಯವರ ಕಾರ್ಯವೈಖರಿಯನ್ನು ಹೊಗಳಿದರಲ್ಲದೆ ಭವನದ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕ್ರಮ ನಿರ್ವಹಿಸುವ ಅವಕಾಶ ನೀಡಿರುವುದಕ್ಕಾಗಿ ವಂದನೆಗಳನ್ನು ಸಲ್ಲಿಸಿದರು.

Advertisement

ವೇದಿಕೆಯಲ್ಲಿ ಪಿಂಪ್ರಿ-ಚಿಂಚಾÌಡ್‌ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಎರ್ಮಾಳ್‌ ಸೀತಾರಾಮ ಶೆಟ್ಟಿ, ಪಿಂಪ್ರಿ-ಚಿಂಚಾÌಡ್‌ ಬಂಟರ ಸಂಘದ ಅಧ್ಯಕ್ಷ ಮಹೇಶ್‌ ಹೆಗ್ಡೆ, ಪುಣೆ ಬಂಟರ  ಸಂಘದ  ಉಪಾಧ್ಯಕ್ಷರಾದ ರಾಮಕೃಷ್ಣ ಶೆಟ್ಟಿ, ಮಾಧವ ಆರ್‌. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಜಿತ್‌ ಹೆಗ್ಡೆ, ಗೌರವ ಕೋಶಾಧಿಕಾರಿ  ಎರ್ಮಾಳ್‌ ಚಂದ್ರಹಾಸ ಶೆಟ್ಟಿ,  ಜತೆ ಕಾರ್ಯದರ್ಶಿ ಸತೀಶ್‌ ಶೆಟ್ಟಿ, ಜತೆ ಕೋಶಾಧಿಕಾರಿ ಶ್ರೀನಿವಾಸ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಂಧ್ಯಾ ವಿ. ಶೆಟ್ಟಿ, ಉತ್ತರ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ ದಿನೇಶ್‌ ಶೆಟ್ಟಿ ಕಳತ್ತೂರು, ದಕ್ಷಿಣ ಪ್ರಾದೇಶಿಕ ಸಮಿತಿ ಕಾರ್ಯಾಧ್ಯಕ್ಷ  ವಸಂತ್‌ ಶೆಟ್ಟಿ ಬೈಲೂರು ಉಪಸ್ಥಿತರಿದ್ದರು.

ಈ ಸಂದರ್ಭ ಸಂಘದ ಪದಾಧಿ ಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗ, ಉತ್ತರ ಮತ್ತು ದಕ್ಷಿಣ ಪ್ರಾದೇಶಿಕ ಸಮಿತಿಗಳ ಪದಾಧಿಕಾರಿಗಳು ಮತ್ತು ಉದ್ಘಾಟನಾ ಸಮಾರಂಭಕ್ಕೆ ನಿಯೋಜಿಸಲಾದ ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ಔತಣಕೂಟವನ್ನು ಆಯೋಜಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next